ಬಳ್ಳಾರಿ : ವಿದ್ಯಾರ್ಥಿ ನಿಲಯಗಳಿಗೆ ಬಾಡಿಗೆ ಕಟ್ಟಡ ಬೇಕಾಗಿದೆ
ಬಳ್ಳಾರಿ, 05 ಅಕ್ಟೋಬರ್ (ಹಿ.ಸ.) ನಗರ ವ್ಯಾಪ್ತಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ (ಮಯೂರ ಹೋಟೆಲ್ ಹಿಂಭಾಗ) ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳ
ಬಳ್ಳಾರಿ : ವಿದ್ಯಾರ್ಥಿ ನಿಲಯಗಳಿಗೆ ಬಾಡಿಗೆ ಕಟ್ಟಡ ಬೇಕಾಗಿದೆ


ಬಳ್ಳಾರಿ, 05 ಅಕ್ಟೋಬರ್ (ಹಿ.ಸ.)

ನಗರ ವ್ಯಾಪ್ತಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ (ಮಯೂರ ಹೋಟೆಲ್ ಹಿಂಭಾಗ) ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಾಗಿದ್ದು, ಬಾಡಿಗೆ ಕಟ್ಟಡ ಬೇಕಾಗಿದೆ.

ಪ್ರಸ್ತುತ ಇರುವ ಕಟ್ಟಡಗಳಲ್ಲಿ ಸ್ಥಳಾವಕಾಶದ ಕೊರತೆ ಕಂಡುಬ0ದಿದ್ದು, ವಿದ್ಯಾರ್ಥಿಗಳ ಆರೋಗ್ಯ ಮತ್ತು ಶೈಕ್ಷಣಿಕ ಹಿತದೃಷ್ಟಿಯಿಂದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಎರಡು ಬಾಡಿಗೆ ಕಟ್ಟಡಗಳ ಅಗತ್ಯವಿದೆ. ಮೆಟ್ರಿಕ್ ಪೂರ್ವ ವಸತಿ ನಿಲಯಕ್ಕಾಗಿ 195 ಮಕ್ಕಳಿಗೆ ಹಾಗೂ ಮೆಟ್ರಿಕ್ ನಂತರದ ನಿಲಯಕ್ಕಾಗಿ 100 ಮಕ್ಕಳಿಗೆ ಅನುಕೂಲಕರವಾಗಿರುವ ಸುಸಜ್ಜಿತ ಕಟ್ಟಡಗಳು ಬೇಕಾಗಿವೆ.

ಆಸಕ್ತ ಕಟ್ಟಡ ಮಾಲೀಕರು ಸೂಕ್ತ ದಾಖಲಾತಿಗಳೊಂದಿಗೆ ಅಕ್ಟೋಬರ್ 08 ರ ಒಳಗೆ ಬಳ್ಳಾರಿಯ ಸಮಾಜ ಕಲ್ಯಾಣ ಇಲಾಖೆಯ ಗ್ರೇಡ್-1 ಸಹಾಯಕ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande