

ಬಳ್ಳಾರಿ, 05 ಅಕ್ಟೋಬರ್ (ಹಿ.ಸ.)
ರಾಜ್ಯ ಸರ್ಕಾರ ಜೋಳವನ್ನು ಖರೀದಿಸಿ ಬಾಕಿ ಉಳಿಸಿಕೊಂಡಿರುವ ಕೋಟ್ಯಾಂತರ ರೂಪಾಯಿ ಹಣವನ್ನು ಸರ್ಕಾರ ರೈತರ ಬ್ಯಾಂಕ್ ಖಾತೆಗಳಿಗೆ ತಕ್ಷಣವೇ ಜಮಾ ಮಾಡುವಂತೆ ಬಳ್ಳಾರಿ ಜಿಲ್ಲಾ ಬಿಜೆಪಿಯ ರೈತ ಮೋರ್ಚಾ ಸರ್ಕಾರಕ್ಕೆ ಆಗ್ರಹಿಸಿದೆ.
ಬಳ್ಳಾರಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎಚ್. ವೀರಣ್ಣಗೌಡ ಇಬ್ರಾಂಪುರ ಹಾಗೂ ಮುಖಂಡರಾದ ಎಸ್. ಗುರುಲಿಂಗನಗೌಡ ಅವರು ಜಂಟಿಯಾಗಿ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಬಳ್ಳಾರಿ ಜಿಲ್ಲೆಯ ರೈತರು ಸರ್ಕಾರಕ್ಕೆ ಜೋಳ ಮಾರಾಟ ಮಾಡಿ ಹಲವು ದಿನಗಳು ಕಳೆದರೂ ರೈತರಿಗೆ ಹಣ ಪಾವತಿಯಾಗಿಲ್ಲ. ಕಾರಣ ರೈತರು ಪುನಃ ಕೃಷಿಯಲ್ಲಿ ಪಾಲ್ಗೊಳ್ಳಲು ಅಗತ್ಯವಾಗಿರುವ ಬಿತ್ತನೆ, ರಸಗೊಬ್ಬರ, ಕೃಷಿ ಕಾರ್ಮಿಕರ ಕೂಲಿ ಪಾವತಿ ಸೇರಿ ವಿವಿಧ ಖರ್ಚುಗಳನ್ನು ನಿರ್ವಹಿಸಲಾಗದೇ ಸಾಲ ತರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ರೈತರು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿ, ಕೌಟುಂಬಿಕವಾಗಿ ಮಾನಸಿಕ ಹಿಂಸೆಗೆ ಒಳಗಾಗುತ್ತಿದ್ದಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್