
ಬಳ್ಳಾರಿ, 05 ಅಕ್ಟೋಬರ್ (ಹಿ.ಸ.)
ಬಳ್ಳಾರಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ (ಬಿಐಟಿಎಂ)ನ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ವಿರೂಪಾಕ್ಷ ಗೌಡ ಆರ್. ಅವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿದೆ.
ಆರ್. ವಿರೂಪಾಕ್ಷಗೌಡ ಅವರು ಡಾ. ಯೆರೆಸೀಮೆ ಸುರೇಶ್ ಅವರ ಮಾರ್ಗದರ್ಶನದಲ್ಲಿ `ಎಮೋಷನ್ ರೆಕಾಗ್ನಿಷನ್ ಥ್ರೂ ಹ್ಯೂಮನ್ ಫೇಸ್ ಡಿಟೆಕ್ಷನ್ ಯೂಸಿಂಗ್ ಆರ್ಟಿಫಿಷಿಯಲ್ ಇಂಟಲಿಜೆನ್ಸ್' ವಿಷಯದ ಕುರಿತು ಸಂಶೋಧನೆ ನಡೆಸಿ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ ಮಹಾಪ್ರಬಂಧಕ್ಕೆ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿಯನ್ನು ಘೋಷಣೆ ಮಾಡಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್