ಕ್ರೀಡಾಪಟುಗಳ ಬಹುಮಾನ ಮೊತ್ತ ಮರುಪರಿಶೀಲನೆ: ಪರಮೇಶ್ವರ
ಬೆಂಗಳೂರು, 05 ಅಕ್ಟೋಬರ್ (ಹಿ.ಸ.): ರಾಜ್ಯದ ಕ್ರೀಡಾಪಟುಗಳಿಗೆ ನೀಡಲಾಗುತ್ತಿರುವ ಬಹುಮಾನ ಮೊತ್ತವನ್ನು ಇತರ ರಾಜ್ಯಗಳಿಗೆ ಹೋಲಿಕೆ ಮಾಡಿ ಮರುಪರಿಶೀಲಿಸಲಾಗುತ್ತಿದೆ. ಈ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಈಗಾಗಲೇ ಚರ್ಚಿಸಲಾಗಿದೆ. ಕ್ರೀಡಾಪಟುಗಳಿಗೆ ಎಷ್ಟು ಬಹುಮಾನ ಮೊತ್ತ ನೀಡಬೇಕು ಎಂಬುದನ್ನು ಮಂಗಳವಾರ
ಡಿಸಿಎಂ ಪರಮೇಶ್ವರ


ಬೆಂಗಳೂರು, 05 ಅಕ್ಟೋಬರ್ (ಹಿ.ಸ.):

ರಾಜ್ಯದ ಕ್ರೀಡಾಪಟುಗಳಿಗೆ ನೀಡಲಾಗುತ್ತಿರುವ ಬಹುಮಾನ ಮೊತ್ತವನ್ನು ಇತರ ರಾಜ್ಯಗಳಿಗೆ ಹೋಲಿಕೆ ಮಾಡಿ ಮರುಪರಿಶೀಲಿಸಲಾಗುತ್ತಿದೆ. ಈ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಈಗಾಗಲೇ ಚರ್ಚಿಸಲಾಗಿದೆ. ಕ್ರೀಡಾಪಟುಗಳಿಗೆ ಎಷ್ಟು ಬಹುಮಾನ ಮೊತ್ತ ನೀಡಬೇಕು ಎಂಬುದನ್ನು ಮಂಗಳವಾರ ಘೋಷಿಸಲಾಗುವುದು ಎಂದು ಉಪಮುಖ್ಯಮಂತ್ರಿ, ಕಂದಾಯ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದರು.

ವಿಧಾನಸೌಧದ ಪಶ್ಚಿಮ ದ್ವಾರದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಪಾನ್‌ನಲ್ಲಿದ್ದಾಗಲೇ ಪೂವಮ್ಮ ಅವರನ್ನು ಸಂಪರ್ಕಿಸಿ ಅಭಿನಂದಿಸಲು ಪ್ರಯತ್ನಿಸಲಾಗಿತ್ತು. ಆದರೆ ಸಂಪರ್ಕ ಸಾಧ್ಯವಾಗಿರಲಿಲ್ಲ. ಅವರು ಭಾರತಕ್ಕೆ ಬಂದ ಒಂದೆರಡು ಗಂಟೆಗಳಲ್ಲೇ ಸಂಪರ್ಕಿಸಿ ಮಾತನಾಡಿದ್ದೇನೆ. ಪೂವಮ್ಮ ಅವರಷ್ಟೇ ಅಲ್ಲದೆ, ಇತರ ಕ್ರೀಡಾಪಟುಗಳೊಂದಿಗೂ ಮಾತನಾಡಿದ್ದೇನೆ ಎಂದರು.

ಇತರ ರಾಜ್ಯಗಳಲ್ಲಿ ಹೆಚ್ಚಿನ ಬಹುಮಾನ ಮೊತ್ತ ನೀಡಲಾಗುತ್ತಿದೆ ಎಂಬ ಮಾಹಿತಿಯನ್ನು ಪಡೆದು ಪರಿಶೀಲಿಸಲಾಗಿದೆ. ರಾಜ್ಯದಲ್ಲಿಯೂ ಬಹುಮಾನ ಮೊತ್ತವನ್ನು ಪುನರ್‌ಪರಿಶೀಲಿಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ. ಮಂಗಳವಾರ ಮುಖ್ಯಮಂತ್ರಿ ಹಾಗೂ ತಾವು ಸರ್ಕಾರದ ವತಿಯಿಂದ ಕ್ರೀಡಾಪಟುಗಳಿಗೆ ನೀಡಬೇಕಾದ ಬಹುಮಾನ ಮೊತ್ತವನ್ನು ಘೋಷಿಸುವುದಾಗಿ ಹೇಳಿದರು

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande