
ಬಳ್ಳಾರಿ, 05 ಅಕ್ಟೋಬರ್ (ಹಿ.ಸ.)
ಸಾರ್ವಜನಿಕರ ಸಾರಿಗೆ ಸಂಬ0ಧಿತ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲೇ ಬಗೆಹರಿಸುವ ನಿಟ್ಟಿನಲ್ಲಿ ಬಳ್ಳಾರಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಕ್ಟೋಬರ್ 15 ರಂದು ಮಧ್ಯಾಹ್ನ 03.30 ಗಂಟೆಗೆ ‘ಸಾರಿಗೆ ಅದಾಲತ್’ ಕಾರ್ಯಕ್ರಮ ಆಯೋಜಿಸಲಾಗಿದೆ.
ಸಾರ್ವಜನಿಕರು ಸಾರಿಗೆ ಇಲಾಖೆಗೆ ಸಂಬ0ಧಿಸಿದ0ತೆ ತಮ್ಮ ಕುಂದುಕೊರತೆ ಹಾಗೂ ಸಮಸ್ಯೆಗಳಿದ್ದಲ್ಲಿ ಅರ್ಜಿಗಳ ಮುಖಾಂತರ ದೂರನ್ನು ಸಲ್ಲಿಸಬಹುದಾಗಿದೆ. ಸಲ್ಲಿಕೆಯಾಗುವ ಸಾರ್ವಜನಿಕರ ಕುಂದುಕೊರತೆಗಳನ್ನು ಅಧಿಕಾರಿಗಳು ಪರಿಶೀಲಿಸಿ, ಸ್ಥಳದಲ್ಲೇ ಸೂಕ್ತ ಪರಿಹಾರ ಹಾಗೂ ಇತ್ಯರ್ಥಗೊಳಿಸಲಿದ್ದಾರೆ.
ಜಿಲ್ಲೆಯ ಸಾರ್ವಜನಿಕರು ಹಾಗೂ ವಾಹನ ಸವಾರರು ಈ ಸಾರಿಗೆ ಅದಾಲತ್ನ ಪ್ರಯೋಜನವನ್ನು ಪಡೆದುಕೊಂಡು, ಬಾಕಿ ಇರುವ ತಮ್ಮ ವಿವಿಧ ಅರ್ಜಿಗಳನ್ನು ಪೂರ್ಣಗೊಳಿಸಿಕೊಳ್ಳಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್