ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ ವೈಸ್ ಅಡ್ಮಿರಲ್ ಸಂಜಯ್ ವಾತ್ಸಾಯನ್
ಬೆಂಗಳೂರು, 05 ಅಕ್ಟೋಬರ್ (ಹಿ.ಸ.): ಪಶ್ಚಿಮ ನೌಕಾಪಡೆ ಕಮಾಂಡ್‌ನ ಕಮಾಂಡಿಂಗ್ ಇನ್ ಚೀಫ್, ವೈಸ್ ಅಡ್ಮಿರಲ್ ಸಂಜಯ್ ವಾತ್ಸಾಯನ್ ಅವರು ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ರಿಯರ್ ಅಡ್ಮಿರಲ್ ವಿಕ್ರಂ ಮೆನನ್, ನೌಕಾಪಡೆಯ ಹಿರಿಯ ಅಧಿಕಾರ
ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ ವೈಸ್ ಅಡ್ಮಿರಲ್ ಸಂಜಯ್ ವಾತ್ಸಾಯನ್


ಬೆಂಗಳೂರು, 05 ಅಕ್ಟೋಬರ್ (ಹಿ.ಸ.):

ಪಶ್ಚಿಮ ನೌಕಾಪಡೆ ಕಮಾಂಡ್‌ನ ಕಮಾಂಡಿಂಗ್ ಇನ್ ಚೀಫ್, ವೈಸ್ ಅಡ್ಮಿರಲ್ ಸಂಜಯ್ ವಾತ್ಸಾಯನ್ ಅವರು ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ರಿಯರ್ ಅಡ್ಮಿರಲ್ ವಿಕ್ರಂ ಮೆನನ್, ನೌಕಾಪಡೆಯ ಹಿರಿಯ ಅಧಿಕಾರಿ ಕಮೋಡೋರ್ ಅಮಿತವ್ ಮುಖರ್ಜಿ, ಕ್ಯಾಪ್ಟನ್ ಜಿ. ರಾಜ್, ಎಲ್.ಎಂ.ಪಿ. ಸಾಹಿಲ್ ಕುಮಾರ್, ಎಲ್.ಎಸ್. ವಿವೇಕ್ ಧಕಡ್, ಎಲ್.ಎಸ್. ಕೆ. ರವಿ ಕೃಷ್ಣನ್, ಎಲ್.ಎಸ್.ಎಂ. ವಿ. ಸೂರಿ ಉಪಸ್ಥಿತರಿದ್ದರು.

ಸಂಸದ ಹಾಗೂ ಮುಖ್ಯಮಂತ್ರಿ ಸಲಹೆಗಾರ ಜಿ.ಸಿ. ಚಂದ್ರಶೇಖರ್, ಅಪರ ಮುಖ್ಯ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯ, ಬಿಡಿಎ ಮುಖ್ಯ ಆಯುಕ್ತ ಮಣಿವಣ್ಣನ್ ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande