ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಭಾಷಾ ಹಿಡಿತ, ಶಿಸ್ತು, ಏಕಾಗ್ರತೆ ಅವಶ್ಯ: ನಟ ದೊಡ್ಡಣ್ಣ
ಬೆಂಗಳೂರು, 05 ಅಕ್ಟೋಬರ್ (ಹಿ.ಸ.): ವಿದ್ಯಾರ್ಥಿಗಳು ತಮ್ಮ ಗುರಿಯತ್ತ ಏಕಾಗ್ರತೆ, ಪರಿಶ್ರಮ ಹಾಗೂ ಕಲಿಕೆಯ ಆಸಕ್ತಿಯಿಂದ ಮುನ್ನಡೆಯಬೇಕು ಎಂದು ಹಿರಿಯ ನಟ ಎಸ್. ದೊಡ್ಡಣ್ಣ ಕರೆ ನೀಡಿದರು. ಬೆಂಗಳೂರು ವಿಶ್ವವಿದ್ಯಾನಿಲಯದ ಜ್ಞಾನಭಾರತಿ ಆವರಣದಲ್ಲಿರುವ ವಿದ್ಯುನ್ಮಾನ ಮಾಧ್ಯಮ ವಿಭಾಗದ ವತಿಯಿಂದ ಆಯೋಜಿಸಲಾ
doddanna-says-language-discipline-and-concentration-essential-for-students


ಬೆಂಗಳೂರು, 05 ಅಕ್ಟೋಬರ್ (ಹಿ.ಸ.):

ವಿದ್ಯಾರ್ಥಿಗಳು ತಮ್ಮ ಗುರಿಯತ್ತ ಏಕಾಗ್ರತೆ, ಪರಿಶ್ರಮ ಹಾಗೂ ಕಲಿಕೆಯ ಆಸಕ್ತಿಯಿಂದ ಮುನ್ನಡೆಯಬೇಕು ಎಂದು ಹಿರಿಯ ನಟ ಎಸ್. ದೊಡ್ಡಣ್ಣ ಕರೆ ನೀಡಿದರು.

ಬೆಂಗಳೂರು ವಿಶ್ವವಿದ್ಯಾನಿಲಯದ ಜ್ಞಾನಭಾರತಿ ಆವರಣದಲ್ಲಿರುವ ವಿದ್ಯುನ್ಮಾನ ಮಾಧ್ಯಮ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ಎರಡು ವಾರಗಳ ವಿದ್ಯಾರ್ಥಿ ಅಭಿಶಿಕ್ಷಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಕನ್ನಡ ಚಿತ್ರರಂಗದ ಸಾಧಕರ ಜೀವನ ಮತ್ತು ಸಾಧನೆಗಳಿಂದ ಪ್ರೇರಣೆ ಪಡೆದು, ಅವರಲ್ಲಿರುವ ಶಿಸ್ತು, ಪರಿಶ್ರಮ, ಸೃಜನಶೀಲತೆ ಹಾಗೂ ಕಲಿಕೆಯ ಗುಣಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಕನ್ನಡ ಭಾಷೆಯ ಸೌಂದರ್ಯ, ಶ್ರೀಮಂತಿಕೆ ಹಾಗೂ ಸಾಹಿತ್ಯಿಕ ಸೊಗಡನ್ನು ಅರಿತುಕೊಳ್ಳಬೇಕು ಎಂದು ದೊಡ್ಡಣ್ಣ ಸಲಹೆ ನೀಡಿದರು.

ವಿದ್ಯಾರ್ಥಿ ಜೀವನದಲ್ಲಿ ಭಾಷೆಯ ಮೇಲಿನ ಹಿಡಿತ, ಶಿಸ್ತು ಹಾಗೂ ಏಕಾಗ್ರತೆ ಅತ್ಯಂತ ಮುಖ್ಯವಾಗಿದ್ದು, ಕಲಿಕೆಯಲ್ಲಿ ನಿರಂತರ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಅವರು ಹೇಳಿದರು.

ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ಮಾತನಾಡಿ, ತಂತ್ರಜ್ಞಾನ ಮತ್ತು ಡಿಜಿಟಲ್ ಮಾಧ್ಯಮದ ಪರಿಣಾಮಕಾರಿ ಬಳಕೆಯಿಂದ ಪತ್ರಕರ್ತರಿಗೆ ಹೊಸ ಅವಕಾಶಗಳು ಸೃಷ್ಟಿಯಾಗುತ್ತಿವೆ ಎಂದರು.

ಇಂದಿಗೂ ಗಟ್ಟಿಯಾದ ಪತ್ರಕರ್ತರಿಗೆ ಮನ್ನಣೆ ಇದೆ. ಓದುಗರ ಮತ್ತು ಪ್ರೇಕ್ಷಕರ ನಿರೀಕ್ಷೆಗಳನ್ನು ಅರ್ಥಮಾಡಿಕೊಂಡು ಅದಕ್ಕೆ ತಕ್ಕಂತೆ ಕೆಲಸ ಮಾಡಿದರೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹಿರಿಯ ಛಾಯಾಗ್ರಾಹಕ ಅಶೋಕ್ ಕಶ್ಯಪ್, ವಿದ್ಯುನ್ಮಾನ ಮಾಧ್ಯಮ ವಿಭಾಗದ ಸಂಯೋಜಕಿ ಪ್ರೊ. ವಾಹಿನಿ ಅರವಿಂದ್, ಪ್ರಾಧ್ಯಾಪಕಿ ಪ್ರೊ. ರಾಜೇಶ್ವರಿ ಆರ್. ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande