ಫಾರ್ಮ್-7 ದುರ್ಬಳಕೆ ಆರೋಪ: ಡಿಸಿಗಳ ದೂರು ಬಳಿಕ ಎಸ್ಐಟಿ ತನಿಖೆ ಬಗ್ಗೆ ತೀರ್ಮಾನ:ಸಚಿವ ಖರ್ಗೆ
ಬೆಂಗಳೂರು, 05 ಅಕ್ಟೋಬರ್ (ಹಿ.ಸ.): ಮತದಾರರ ಪಟ್ಟಿಯ ಪರಿಷ್ಕರಣೆ ಸಂದರ್ಭದಲ್ಲಿ ಚುನಾವಣಾ ಆಯೋಗದ ಫಾರ್ಮ್-7 ದುರ್ಬಳಕೆಯಾಗಿದೆ ಎಂಬ ಆರೋಪಗಳ ಕುರಿತು ವಿಶೇಷ ತನಿಖಾ ತಂಡ ರಚಿಸುವ ಬಗ್ಗೆ ಜಿಲ್ಲಾಧಿಕಾರಿಗಳಿಂದ ಚುನಾವಣಾ ಆಯೋಗಕ್ಕೆ ದೂರು ಬಂದ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪ್ರಿಯಾಂ
form-7-misuse-sit-decision-after-dcs-complaint-priyank-kharge


ಬೆಂಗಳೂರು, 05 ಅಕ್ಟೋಬರ್ (ಹಿ.ಸ.):

ಮತದಾರರ ಪಟ್ಟಿಯ ಪರಿಷ್ಕರಣೆ ಸಂದರ್ಭದಲ್ಲಿ ಚುನಾವಣಾ ಆಯೋಗದ ಫಾರ್ಮ್-7 ದುರ್ಬಳಕೆಯಾಗಿದೆ ಎಂಬ ಆರೋಪಗಳ ಕುರಿತು ವಿಶೇಷ ತನಿಖಾ ತಂಡ ರಚಿಸುವ ಬಗ್ಗೆ ಜಿಲ್ಲಾಧಿಕಾರಿಗಳಿಂದ ಚುನಾವಣಾ ಆಯೋಗಕ್ಕೆ ದೂರು ಬಂದ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫಾರ್ಮ್-7 ಮೂಲಕ ತಪ್ಪು ಮಾಹಿತಿ ನೀಡಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲು ಅರ್ಜಿ ಸಲ್ಲಿಸಿರುವ ಬಗ್ಗೆ ಹಲವು ದೂರುಗಳು ಬಂದಿವೆ.

ಜಿಲ್ಲಾಧಿಕಾರಿಗಳು ಈ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ. ಅವರ ಮೂಲಕ ಚುನಾವಣಾ ಆಯೋಗಕ್ಕೆ ಅಧಿಕೃತ ದೂರು ಬಂದ ಬಳಿಕ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದರು.

“ಖಾಸಗಿ ವ್ಯಕ್ತಿಗಳು ನೀಡುತ್ತಿರುವ ದೂರುಗಳನ್ನು ಪರಿಶೀಲಿಸಲಾಗುತ್ತಿದೆ. ಜಿಲ್ಲಾಧಿಕಾರಿಗಳು ಈಗಾಗಲೇ ಪರಿಶೀಲನೆ ನಡೆಸುತ್ತಿದ್ದಾರೆ.

ಜಿಲ್ಲಾಧಿಕಾರಿಗಳ ಮೂಲಕ ಚುನಾವಣಾ ಆಯೋಗಕ್ಕೆ ದೂರು ಬರಲಿ. ದೂರು ಬಂದ ಬಳಿಕ ಅದರ ಬಗ್ಗೆ ನೋಡೋಣ. ಕಾನೂನು ಚೌಕಟ್ಟಿನಲ್ಲಿಯೇ ಪ್ರಕರಣ ದಾಖಲಿಸಲು ಸಾಧ್ಯ,” ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಕೆಲವು ಪ್ರದೇಶಗಳಲ್ಲಿ ಜೀವಂತವಾಗಿರುವವರನ್ನು ಮೃತಪಟ್ಟಿದ್ದಾರೆ ಎಂದು ನಮೂದಿಸಿ ಫಾರ್ಮ್-7 ಅರ್ಜಿ ಸಲ್ಲಿಸಿರುವ ಆರೋಪಗಳು ಕೇಳಿಬಂದಿವೆ.

ಇಂತಹ ಪ್ರಕರಣಗಳಲ್ಲಿ ಸಂಬಂಧಪಟ್ಟವರು ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಫಾರ್ಮ್-7 ದುರ್ಬಳಕೆ ಒಂದು ದೊಡ್ಡ ಅಕ್ರಮವಾಗಿದ್ದು, ಇದರ ಹಿಂದೆ ಸಂಘಟಿತ ಪ್ರಯತ್ನವಿದೆ ಎಂಬ ಆರೋಪವನ್ನೂ ಪ್ರಿಯಾಂಕ್ ಖರ್ಗೆ ಮಾಡಿದ್ದಾರೆ.

ಆದರೆ, ಯಾವುದೇ ಪ್ರಕರಣವನ್ನು ಕಾನೂನುಬದ್ಧ ದೂರು ಮತ್ತು ಲಭ್ಯವಿರುವ ದಾಖಲೆಗಳ ಆಧಾರದ ಮೇಲೆಯೇ ದಾಖಲಿಸಬೇಕಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande