ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್ ಡಿ ಎ ಗೆಲುವು: ವಿಜಯೇಂದ್ರ ವಿಶ್ವಾಸ
ಬೆಂಗಳೂರು, 05 ಅಕ್ಟೋಬರ್ (ಹಿ.ಸ.): ಕರ್ನಾಟಕ ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಒಳಗೊಂಡ ಎನ್ಡಿಎ ಮೈತ್ರಿಕೂಟವು ನಾಲ್ಕೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
vijayendra-confident-of-nda-victory-in-all-four-council-seats


ಬೆಂಗಳೂರು, 05 ಅಕ್ಟೋಬರ್ (ಹಿ.ಸ.):

ಕರ್ನಾಟಕ ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಒಳಗೊಂಡ ಎನ್ಡಿಎ ಮೈತ್ರಿಕೂಟವು ನಾಲ್ಕೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಕ್ಟೋಬರ್ 23ರಂದು ವಿಧಾನ ಪರಿಷತ್ತಿನ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಗಳ ಒಟ್ಟು ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಈ ಚುನಾವಣೆಯನ್ನು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿ ಎದುರಿಸುತ್ತಿದ್ದು, ಕ್ಷೇತ್ರವಾರು ಸಮನ್ವಯ ಹಾಗೂ ಮತ ವರ್ಗಾವಣೆಗೆ ಸಂಬಂಧಿಸಿದಂತೆ ಉಭಯ ಪಕ್ಷಗಳ ನಾಯಕರು ಕಾರ್ಯತಂತ್ರ ರೂಪಿಸಿದ್ದಾರೆ.

ನಾಲ್ಕೂ ಕ್ಷೇತ್ರಗಳನ್ನು ಗೆಲ್ಲುವ ಗುರಿಯೊಂದಿಗೆ ಬಿಜೆಪಿ–ಜೆಡಿಎಸ್ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಎನ್ಡಿಎ ನಾಯಕರು ಸಭೆಯಲ್ಲಿ ಸೂಚಿಸಿದ್ದಾರೆ.

ಬೆಂಗಳೂರು ಶಿಕ್ಷಕರ ಕ್ಷೇತ್ರ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಮೈತ್ರಿಕೂಟದ ಅಭ್ಯರ್ಥಿಗಳ ಪರ ಸಂಘಟಿತವಾಗಿ ಪ್ರಚಾರ ನಡೆಸಲು ತೀರ್ಮಾನಿಸಲಾಗಿದೆ.

“ಬಿಜೆಪಿ ಮತ್ತು ಜೆಡಿಎಸ್ ಒಗ್ಗಟ್ಟಾಗಿ ಚುನಾವಣೆಯನ್ನು ಎದುರಿಸುತ್ತಿದ್ದು, ನಾಲ್ಕೂ ಕ್ಷೇತ್ರಗಳಲ್ಲೂ ಎನ್ ಡಿ ಎ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸವಿದೆ” ಎಂದು ವಿಜಯೇಂದ್ರ ಹೇಳಿದ್ದಾರೆ.

ಎನ್ ಡಿ ಎ ಪರವಾಗಿ ಪಶ್ಚಿಮ ಪದವೀಧರ ಕ್ಷೇತ್ರದಿಂದ ಎಸ್.ವಿ. ಸಂಕನೂರು, ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಶಶಿಲ್ ನಮೋಶಿ ಹಾಗೂ ಆಗ್ನೇಯ ಪದವೀಧರ ಕ್ಷೇತ್ರದಿಂದ ಕೆ.ಎಂ. ಸುರೇಶ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಎ.ಪಿ. ರಂಗನಾಥ್ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande