ಬಳ್ಳಾರಿ : ಅ.09 ರಂದು ಏರೋಸ್ಪೇಸ್ ನೇರ ಸಂರ್ದಶನ
ಬಳ್ಳಾರಿ, 06 ಅಕ್ಟೋಬರ್ (ಹಿ.ಸ.) ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅಕ್ಟೋಬರ್ 09 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ನಗರದ ಹಳೆಯ ತಾಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ. ಸಂದರ್ಶನದಲ್ಲಿ ಏರೋಸ್ಪೇಸ್ ಪ್ರೆವೇಟ್ ಲಿಮಿ
ಬಳ್ಳಾರಿ : ಅ.09 ರಂದು ಏರೋಸ್ಪೇಸ್ ನೇರ ಸಂರ್ದಶನ


ಬಳ್ಳಾರಿ, 06 ಅಕ್ಟೋಬರ್ (ಹಿ.ಸ.)

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅಕ್ಟೋಬರ್ 09 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ನಗರದ ಹಳೆಯ ತಾಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.

ಸಂದರ್ಶನದಲ್ಲಿ ಏರೋಸ್ಪೇಸ್ ಪ್ರೆವೇಟ್ ಲಿಮಿಟೆಡ್ ಬೆಂಗಳೂರು, ಇವರು ತಮಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು.

ವಿದ್ಯಾರ್ಹತೆಯು ಪಿಯುಸಿ, ಪದವಿ, ಐಟಿಐ, ಅಥವಾ ಡಿಪ್ಲೋಮಾ ಪೂರ್ಣಗೊಳಿಸಿರಬೇಕು. ವಯೋಮಿತಿ ಗರಿಷ್ಠ 32 ವರ್ಷ ಮೀರಿರಬಾರದು. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಬ್ಬರೂ ಸಂದರ್ಶನದಲ್ಲಿ ಭಾಗವಹಿಸಬಹುದು. ಸಂದರ್ಶನದಲ್ಲಿ ಪಾಲ್ಗೊಳ್ಳಲು ಯಾವುದೇ ಶುಲ್ಕ ಇರುವುದಿಲ್ಲ (ಸಂಪೂರ್ಣ ಉಚಿತ).

ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವ-ವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನಿಗದಿತ ಸಮಯಕ್ಕೆ ಹಾಜರಾಗಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳಾದ 7619207762, 9663263086, 7676774293, 6360408094 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande