ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಮತ ಎಣಿಕೆ ಕೇಂದ್ರದಲ್ಲಿ ನಿಷೇಧ
ಬಳ್ಳಾರಿ, 06 ಅಕ್ಟೋಬರ್ (ಹಿ.ಸ.) ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯವು ಅಕ್ಟೋಬರ್ 27 ರಂದು ಬೆಳಿಗ್ಗೆ 8 ಗಂಟೆಯಿAದ ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದ ಗಣಿತ ವಿಭಾಗದ ಭಾಸ್ಕರ ಸಭಾಂಗಣದಲ್ಲಿ ನಡೆಯಲಿದೆ. ಮತ ಎಣಿಕೆ ಕೇಂದ್ರಕ್ಕೆ ಬೆಂಕಿ ಪೊಟ್ಟ
ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಮತ ಎಣಿಕೆ ಕೇಂದ್ರದಲ್ಲಿ ನಿಷೇಧ


ಬಳ್ಳಾರಿ, 06 ಅಕ್ಟೋಬರ್ (ಹಿ.ಸ.)

ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯವು ಅಕ್ಟೋಬರ್ 27 ರಂದು ಬೆಳಿಗ್ಗೆ 8 ಗಂಟೆಯಿAದ ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದ ಗಣಿತ ವಿಭಾಗದ ಭಾಸ್ಕರ ಸಭಾಂಗಣದಲ್ಲಿ ನಡೆಯಲಿದೆ.

ಮತ ಎಣಿಕೆ ಕೇಂದ್ರಕ್ಕೆ ಬೆಂಕಿ ಪೊಟ್ಟಣ, ಲೈಟರ್, ಫೌಂಟೇನ್ ಇಂಕ್ ಪೇನ್, ಮೊಬೈಲ್ ಫೋನ್, ಸಿಗರೇಟ್, ಪಾನ, ಬೀಡಾ ತಂಬಾಕು, ನೀರಿನ ಬಾಟಲ್ ಕೊಂಡೊಯ್ಯುವುದನ್ನು ನಿಷೇಧಿಸಿ ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಜಹೀರಾ ನಸೀಮ್ ಅವರು ಆದೇಶಿಸಿದ್ದಾರೆ.

ಇದಲ್ಲದೆ ಮತ ಎಣಿಕೆ ದಿನದಂದು ಗುಲಬರ್ಗಾ ವಿಶ್ವವಿದ್ಯಾಲಯ ಆವರಣದಲ್ಲಿ ಖಾಸಗಿ ವಾಹನಗಳ ಪ್ರವೇಶವನ್ನು (ಅಭ್ಯರ್ಥಿ ಹಾಗೂ ಪತ್ರಕರ್ತರನ್ನು ಹೊರತುಪಡಿಸಿ) ಸಹ ನಿಷೇಧಿಸಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande