ನಂದಿನಿ ಹಾಲಿನ ದರ ಏರಿಕೆ: ಪ್ರತಿ ಲೀಟರ್ಗೆ ₹8 ಹೆಚ್ಚಳಕ್ಕೆ ಸಂಪುಟ ಸಹಮತ
ಅ.27ರ ಬಳಿಕ ನಂದಿನಿ ಹಾಲಿನ ದರ ಪ್ರತಿ ಲೀಟರ್ಗೆ ₹8ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದ್ದು, ದರ ಏರಿಕೆಗೆ ರಾಜ್ಯ ಸಚಿವ ಸಂಪುಟ ಸಹಮತ ಸೂಚಿಸಿದೆ.
nandini-milk-price-hike-rs-8-per-litre-after-october-27


ಬೆಂಗಳೂರು, 06 ಅಕ್ಟೋಬರ್ (ಹಿ.ಸ.):

ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಎದುರಾಗಿದೆ. ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ಗೆ ₹8ರಷ್ಟು ಹೆಚ್ಚಿಸಲು ರಾಜ್ಯ ಸಚಿವ ಸಂಪುಟ ಸಹಮತ ಸೂಚಿಸಿದೆ. ಅಕ್ಟೋಬರ್ 27ರ ಬಳಿಕ ಹೊಸ ದರ ಜಾರಿಗೆ ಬರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ವತಿಯಿಂದ ಹಾಲಿನ ದರ ಪರಿಷ್ಕರಣೆ ಕುರಿತು ಸರ್ಕಾರದ ಮುಂದೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಹಾಲು ಉತ್ಪಾದಕರಿಗೆ ಹೆಚ್ಚಿನ ಬೆಲೆ ನೀಡುವುದು, ಉತ್ಪಾದನಾ ವೆಚ್ಚ ಹೆಚ್ಚಳ ಸೇರಿದಂತೆ ವಿವಿಧ ಕಾರಣಗಳನ್ನು ಮುಂದಿಟ್ಟುಕೊಂಡು ದರ ಏರಿಕೆಗೆ ಮನವಿ ಮಾಡಲಾಗಿತ್ತು.

ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದಿದ್ದು, ಪ್ರತಿ ಲೀಟರ್ಗೆ ₹8ರಷ್ಟು ದರ ಹೆಚ್ಚಳಕ್ಕೆ ಒಪ್ಪಿಗೆ ದೊರೆತಿದೆ.

ಅಕ್ಟೋಬರ್ 27ರ ನಂತರ ದರ ಹೆಚ್ಚಳ ಜಾರಿಗೆ ಬರುವ ಸಾಧ್ಯತೆ ಇರುವುದರಿಂದ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆಯಾಗುವ ನಿರೀಕ್ಷೆಯಿದೆ. ಇದರಿಂದ ಗ್ರಾಹಕರಿಗೆ ಹೆಚ್ಚುವರಿ ಹೊರೆ ಬೀಳುವ ಸಾಧ್ಯತೆ ಇದೆ.

“ಹಾಲು ಉತ್ಪಾದಕರ ಹಿತಾಸಕ್ತಿ, ಉತ್ಪಾದನಾ ವೆಚ್ಚ ಹಾಗೂ ಗ್ರಾಹಕರ ಹಿತವನ್ನು ಪರಿಗಣಿಸಿ ದರ ಪರಿಷ್ಕರಣೆ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ” ಎಂದು ಸರ್ಕಾರದ ಮೂಲಗಳು ತಿಳಿಸಿವೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande