ಇಡಿ ಜಂಟಿ ನಿರ್ದೇಶಕ ಸ್ವಪನ್ ಬೋಸ್ ನಿಧನ
ನವದೆಹಲಿ, 06 ಅಕ್ಟೋಬರ್ (ಹಿ.ಸ.): ಜಾರಿ ನಿರ್ದೇಶನಾಲಯದ ಜಂಟಿ ನಿರ್ದೇಶಕ ಸ್ವಪನ್ ಬೋಸ್ ಅವರು ದೀರ್ಘಕಾಲದ ಅನಾರೋಗ್ಯದಿಂದ ಮಂಗಳವಾರ ನಿಧನರಾದರು. ಅವರು 33 ವರ್ಷಗಳಿಂದ ಜಾರಿ ನಿರ್ದೇಶನಾಲಯದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸ್ವಪನ್ ಬೋಸ್ ಅವರ ನಿಧನವು ಸಂಸ್ಥೆ ಹಾಗೂ ಸಾರ್ವಜನಿಕ ಸೇವಾ ಕ್ಷೇತ್ರಕ್ಕ
प्रवर्तन निदेशालय (ईडी) के संयुक्त निदेशक स्वपन बोस, जिनका मंगलवार को लंबी बीमारी के बाद निधन हो गया। उन्होंने ईडी में 33 वर्षों तक सेवाएं दीं।


ನವದೆಹಲಿ, 06 ಅಕ್ಟೋಬರ್ (ಹಿ.ಸ.):

ಜಾರಿ ನಿರ್ದೇಶನಾಲಯದ ಜಂಟಿ ನಿರ್ದೇಶಕ ಸ್ವಪನ್ ಬೋಸ್ ಅವರು ದೀರ್ಘಕಾಲದ ಅನಾರೋಗ್ಯದಿಂದ ಮಂಗಳವಾರ ನಿಧನರಾದರು. ಅವರು 33 ವರ್ಷಗಳಿಂದ ಜಾರಿ ನಿರ್ದೇಶನಾಲಯದಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಸ್ವಪನ್ ಬೋಸ್ ಅವರ ನಿಧನವು ಸಂಸ್ಥೆ ಹಾಗೂ ಸಾರ್ವಜನಿಕ ಸೇವಾ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಎಂದು ಜಾರಿ ನಿರ್ದೇಶನಾಲಯ ಸಂತಾಪ ಸಂದೇಶದಲ್ಲಿ ತಿಳಿಸಿದೆ.

ದೀರ್ಘ ಸೇವಾವಧಿಯಲ್ಲಿ ಸ್ವಪನ್ ಬೋಸ್ ಅವರು ಹಲವು ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿದ್ದು, ವೃತ್ತಿಪರ ಸಾಮರ್ಥ್ಯ, ಸಂಸ್ಥೆಯ ಮೇಲಿನ ಬದ್ಧತೆ ಹಾಗೂ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದ್ದರು ಎಂದು ಸಂಸ್ಥೆ ಹೇಳಿದೆ. ವಿಶಿಷ್ಟ ಸಾಮರ್ಥ್ಯ, ಕರ್ತವ್ಯನಿಷ್ಠೆ ಹಾಗೂ ಅಚಲ ಸಮರ್ಪಣೆಯ ಅಧಿಕಾರಿಯಾಗಿ ಅವರನ್ನು ಇಲಾಖೆ ಸ್ಮರಿಸಿದೆ.

ಜಾರಿ ನಿರ್ದೇಶನಾಲಯದ ನಿರ್ದೇಶಕರು ಸೇರಿದಂತೆ ಕೇಂದ್ರ ಕಚೇರಿ ಹಾಗೂ ಎಲ್ಲ ಪ್ರಾದೇಶಿಕ ಮತ್ತು ಉಪಪ್ರಾದೇಶಿಕ ಕಚೇರಿಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ವಪನ್ ಬೋಸ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅವರ ಕುಟುಂಬದವರು, ಬಂಧುಗಳು ಹಾಗೂ ಸಹೋದ್ಯೋಗಿಗಳಿಗೆ ಆಳವಾದ ಸಂತಾಪ ವ್ಯಕ್ತಪಡಿಸಿದ್ದಾರೆ.

ದುಃಖದ ಈ ಸಂದರ್ಭದಲ್ಲಿ ಜಾರಿ ನಿರ್ದೇಶನಾಲಯವು ಶೋಕತಪ್ತ ಕುಟುಂಬದೊಂದಿಗೆ ದೃಢವಾಗಿ ನಿಂತಿದೆ ಹಾಗೂ ಅಗಲಿದ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande