
ಬಳ್ಳಾರಿ, 06 ಅಕ್ಟೋಬರ್ (ಹಿ.ಸ.)
ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ಅಕ್ಟೋಬರ್ 23 ರಂದು ಬೆಳಿಗ್ಗೆ 8 ಗಂಟೆಯಿ0ದ ಸಂಜೆ 4 ಗಂಟೆ ವರೆಗೆ ಕ್ಷೇತ್ರದಾದ್ಯಂತ ನಡೆಯಲಿದ್ದು, ಮತ ಚಲಾಯಿಸಲು ಅನುಕೂಲವಾಗುವಂತೆ ಕ್ಷೇತ್ರದ ನೊಂದಾಯಿತ ಮತದಾರರಿಗೆ ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಜಹೀರಾ ನಸೀಮ್ ಅವರು ರಜೆ ಘೋಷಿಸಿದ್ದಾರೆ.
ಇನ್ನು ಮತ ಎಣಿಕೆ ಕಾರ್ಯವು ಅಕ್ಟೋಬರ್ 27 ರಂದು ಬೆಳಿಗ್ಗೆ 8 ಗಂಟೆಯಿ0ದ ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದ ಗಣಿತ ವಿಭಾಗದ ಭಾಸ್ಕರ ಸಭಾಂಗಣದಲ್ಲಿ ನಡೆಯಲಿದ್ದು, ಅಂದು ಗಣಿತ ವಿಭಾಗದ ಕಟ್ಟಡ ಮತ್ತು ಭದ್ರತಾ ಕೊಠಡಿಯ ಎಲ್ಲಾ ಸಿಬ್ಬಂದಿಗಳಿಗೂ ಸಹ ರಜೆ ಘೋಷಿಸಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್