ಏಷ್ಯನ್ ಗೇಮ್ಸ್ ನಲ್ಲಿ ದೇಶದ ಕೀರ್ತಿ ಪತಾಕೆ ಹಾರಿಸಿದ ರಾಜ್ಯದ ಕ್ರೀಡಾಪಟುಗಳಿಗೆ ಸಿಎಂ ಡಿ ಕೆ ಶಿವಕುಮಾರ್ ಸನ್ಮಾನ
ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ರಾಜ್ಯ ಸರ್ಕಾರ ನೀಡುವ ನಗದು ಪುರಸ್ಕಾರವನ್ನು ಹೆಚ್ಚಿಸಿದ್ದು, ಚಿನ್ನಕ್ಕೆ ₹1 ಕೋಟಿ, ಬೆಳ್ಳಿಗೆ ₹75 ಲಕ್ಷ ಹಾಗೂ ಕಂಚಿಗೆ ₹50 ಲಕ್ಷ ನೀಡಲಾಗುವುದು. ಅಲ್ಲದೆ, ಭಾಗವಹಿಸಿದ ಪ್ರತಿ ಕ್ರೀಡಾಪಟುವಿಗೆ ₹5 ಲಕ್ಷ ಪ್ರೋತ್ಸಾಹಧನ ನೀಡಲಾಗುತ್ತದೆ.
karnataka-enhances-cash-awards-for-asian-games-medallists


ಬೆಂಗಳೂರು, 06 ಅಕ್ಟೋಬರ್ (ಹಿ.ಸ.):

ಏಷ್ಯನ್ ಗೇಮ್ಸ್ 2026ರಲ್ಲಿ ದೇಶ ಹಾಗೂ ಕರ್ನಾಟಕದ ಕೀರ್ತಿ ಪತಾಕೆ ಹಾರಿಸಿದ ರಾಜ್ಯದ ಕ್ರೀಡಾಪಟುಗಳನ್ನು ಸಿಎಂ‌ ಡಿ ಕೆ‌ ಶಿವಕುಮಾರ್ ‌ಅವರು ವಿಧಾ‌ನಸೌಧದಲ್ಲಿ ಮಂಗಳವಾರ ಸನ್ಮಾನಿಸಿದರು. 8 ಪದಕ ವಿಜೇತರಿಗೆ ಒಟ್ಟು 8 ಕೋಟಿ ರೂ. ನಗದು ಬಹುಮಾನ ಘೋಷಿಸಿದರು.

ಪದಕ ವಿಜೇತರು ಸೇರಿದಂತೆ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದಿಂದ ಹಲವು ಮಹತ್ವದ ಪ್ರೋತ್ಸಾಹಕ ಕ್ರಮಗಳನ್ನು ಇದೇ ವೇಳೆ ಸಿಎಂ ಘೋಷಿಸಿದರು.

ಏಷ್ಯನ್ ಗೇಮ್ಸ್ 2026ರಲ್ಲಿ ಭಾಗವಹಿಸಲು ಅರ್ಹತೆ ಪಡೆದು ಸ್ಪರ್ಧಿಸಿದ ಕರ್ನಾಟಕದ 20 ಕ್ರೀಡಾಪಟುಗಳಿಗೆ ಇದೇ ಮೊದಲ ಬಾರಿಗೆ ತಲಾ 5 ಲಕ್ಷ ರೂ. ನಗದು ಪ್ರೋತ್ಸಾಹಧನ ಮಂಜೂರು ಮಾಡಲಾಗಿದೆ. ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಕ್ರಿಕೆಟ್, ಸೈಕ್ಲಿಂಗ್, ಎಕ್ವೆಸ್ಟ್ರಿಯನ್, ಗಾಲ್ಫ್, ಹಾಕಿ, ಶೂಟಿಂಗ್, ಈಜು, ಟೇಬಲ್ ಟೆನಿಸ್ ಹಾಗೂ ಸ್ಪೋರ್ಟ್ಸ್ ಕ್ಲೈಂಬಿಂಗ್ ವಿಭಾಗಗಳ ಕ್ರೀಡಾಪಟುಗಳು ಇದರ ಫಲಾನುಭವಿಗಳಾಗಿದ್ದಾರೆ.

ಪದಕ ವಿಜೇತರ ಬಹುಮಾನ ಮೊತ್ತ ಹೆಚ್ಚಳಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕರ್ನಾಟಕದ ಕ್ರೀಡಾಪಟುಗಳಿಗೆ ನೀಡಲಾಗುತ್ತಿದ್ದ ನಗದು ಬಹುಮಾನವನ್ನೂ ಸಿಎಂ ಹೆಚ್ಚಳ ಮಾಡಿದ್ದಾರೆ. ಈ ಹಿಂದೆ ಚಿನ್ನದ ಪದಕ ವಿಜೇತರಿಗೆ 35 ಲಕ್ಷ ರೂ., ಬೆಳ್ಳಿ ಪದಕ ವಿಜೇತರಿಗೆ 25 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತರಿಗೆ 15 ಲಕ್ಷ ರೂ. ನೀಡಲಾಗುತ್ತಿತ್ತು. ಸಿಎಂ ಡಿ ಕೆ‌ ಶಿವಕುಮಾರ್ ಅವರು ಚಿನ್ನದ ಪದಕಕ್ಕೆ 1 ಕೋಟಿ ರೂ., ಬೆಳ್ಳಿ ಪದಕಕ್ಕೆ 75 ಲಕ್ಷ ಹಾಗೂ ಕಂಚಿನ ಪದಕಕ್ಕೆ 50 ಲಕ್ಷ ನಗದು ಬಹುಮಾನ ನೀಡಲು ನಿರ್ಧರಿಸಿದ್ದಾರೆ.

ಕ್ರೀಡಾಪಟುಗಳಿಗೆ ನೇರ ನೇಮಕಾತಿ ಅವಕಾಶ

ಏಷ್ಯನ್ ಗೇಮ್ಸ್ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತರಿಗೆ ಗುಂಪು-ಬಿ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ನೇಮಕಾತಿಯನ್ನು ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯ ಆಯ್ಕೆ ಸಮಿತಿಯ ಮೂಲಕ ಕೈಗೊಳ್ಳಲಾಗುವುದು.

ಒಲಿಂಪಿಕ್ಸ್ ತಯಾರಿಗೆ ತಲಾ 10 ಲಕ್ಷ

ಮುಂದಿನ ಹಂತದಲ್ಲಿ ಒಲಿಂಪಿಕ್ಸ್‌ಗೆ ಸಜ್ಜಾಗುತ್ತಿರುವ ಕ್ರೀಡಾಪಟುಗಳಿಗೂ ಸರ್ಕಾರ ನೆರವು ನೀಡಿದೆ. ಏಷ್ಯನ್ ಗೇಮ್ಸ್ ಪದಕ ವಿಜೇತರಾದ ಎಂ.ಆರ್. ಪೂವಮ್ಮ, ಸ್ನೇಹಾ ಎಸ್.ಎಸ್., ಶ್ರೇಯಾಂಕಾ ಪಾಟೀಲ್ ಹಾಗೂ ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತೆ ಶಿಲ್ಪಾ ಕೆ.ಎಸ್. ಅವರನ್ನು ‘ಗುರಿ ಒಲಿಂಪಿಕ್ಸ್’ ಯೋಜನೆಗೆ 2026-27ನೇ ಸಾಲಿಗೆ ಸೇರ್ಪಡೆ ಮಾಡಲಾಗಿದೆ. ಒಲಿಂಪಿಕ್ಸ್ ತಯಾರಿಗಾಗಿ ತಲಾ 10 ಲಕ್ಷ ರೂ. ನಗದು ಪ್ರೋತ್ಸಾಹಧನವನ್ನು ಇವರಿಗೆ ನೀಡಲಾಗುತ್ತದೆ.

ಸರ್ಕಾರಿ ಉದ್ಯೋಗಗಳಲ್ಲಿ ಕ್ರೀಡಾಪಟುಗಳಿಗೆ 2% ಮೀಸಲಾತಿ

ಸಾಧಕ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರಿ ನೇರ ನೇಮಕಾತಿಗಳಲ್ಲಿ 2% ಮೀಸಲಾತಿ ಜಾರಿಗೆ ತರಲಾಗಿದೆ. ಗುಂಪು-ಎ, ಗುಂಪು-ಬಿ, ಗುಂಪು-ಸಿ ಮತ್ತು ಗುಂಪು-ಡಿ ಹುದ್ದೆಗಳ ನೇರ ನೇಮಕಾತಿಯಲ್ಲಿ ಈ ಮೀಸಲಾತಿ ಅನ್ವಯವಾಗಲಿದೆ. ಈ ಕುರಿತು ಅಕ್ಟೋಬರ್ 3, 2026 ರಂದು ಅಧಿಸೂಚನೆ ಹೊರಡಿಸಲಾಗಿದೆ.

ಪದಕ ವಿಜೇತ 08 ಕ್ರೀಡಾಪಟುಗಳ ವಿವರ ಹಾಗೂ ಬಹುಮಾನ ಮೊತ್ತ:

ಶ್ರೇಯಾಂಕ ಆರ್. ಪಾಟೀಲ್ (ಕ್ರಿಕೆಟ್ ಮಹಿಳಾ ತಂಡ, ಚಿನ್ನ), ಎಂ.ಆರ್. ಪೂವಮ್ಮ (ಅಥ್ಲೆಟಿಕ್ಸ್ 4x400 ಮಿಶ್ರ ರಿಲೇ, 4x400 ಮಹಿಳಾ ರಿಲೇ ಬೆಳ್ಳಿ ಮತ್ತು ಚಿನ್ನ) ತಿಲೋತ್ತಮ ಸೇನ್ (ಶೂಟಿಂಗ್, ಮಹಿಳೆಯರ 50 ಮೀ ರೈಫಲ್, ಬೆಳ್ಳಿ)ಆಯುಷ್ ಆರ್ ಶೆಟ್ಟಿ (ಪುರುಷರ ತಂಡ ಬ್ಯಾಡ್ಮಿಂಟನ್, ಬೆಳ್ಳಿ)ಸ್ನೇಹಾ ಎಸ್.ಎಸ್. ( ಅಥ್ಲೆಟಿಕ್ಸ್ 4x100 ಮಿಶ್ರ ರಿಲೇ ಕಂಚು)ಅಧಿತಿ ಅಶೋಕ್ (ಗಾಲ್ಫ್ ಮಹಿಳಾ ತಂಡ, ಬೆಳ್ಳಿ)ಪ್ರಣವಿ ಎಸ್. ಅರಸ್ (ಗಾಲ್ಫ್ ಮಹಿಳಾ ತಂಡ, ಬೆಳ್ಳಿ ಹಾಗೂ ವೈಯಕ್ತಿಕ ಚಿನ್ನ)ಮೋಹಿತ್ ಹೆಚ್.ಎಸ್. (ಹಾಕಿ ಪುರುಷರ ತಂಡ, ಚಿನ್ನ)

ಏಷ್ಯನ್ ಗೇಮ್ಸ್ 2026 ರಲ್ಲಿ ಭಾಗವಹಿಸಿ ತಲಾ ₹5.00 ಲಕ್ಷ ರೂ. ಪ್ರೋತ್ಸಾಹಧನ ಪಡೆದ 20 ಕ್ರೀಡಾಪಟುಗಳು

ಯಶಸ್ ಪಾಲಾಕ್ಷ - ಅಥ್ಲೆಟಿಕ್ಸ್ಸುಪ್ರಿಯಾ ಸಿಂಡಿಗೆರೆ ಬಸವರಾಜು - ಅಥ್ಲೆಟಿಕ್ಸ್ಉನ್ನತಿ ಅಯ್ಯಪ್ಪ - ಅಥ್ಲೆಟಿಕ್ಸ್ಎಂ.ಆರ್. ಪೂವಮ್ಮ - ಅಥ್ಲೆಟಿಕ್ಸ್ಸ್ನೇಹಾ ಎಸ್.ಎಸ್. - ಅಥ್ಲೆಟಿಕ್ಸ್ಆಯುಷ್ ಶೆಟ್ಟಿ - ಬ್ಯಾಡ್ಮಿಂಟನ್ಶ್ರೇಯಾಂಕ ಆರ್. ಪಾಟೀಲ್ - ಕ್ರಿಕೆಟ್ T20ಕೀರ್ತಿ ರಂಗಸ್ವಾಮಿ - ಸೈಕ್ಲಿಂಗ್ ಟ್ರ್ಯಾಕ್ಫವಾದ್ ಮಿರ್ಜಾ- ಈಕ್ವೇಸ್ಟ್ರೀಯನ್ಅಧಿತಿ ಅಶೋಕ್ - ಗಾಲ್ಫ್ಪ್ರಣವಿ ಎಸ್. ಅರಸ್ - ಗಾಲ್ಫ್ಮೋಹಿತ್ ಹೆಚ್.ಎಸ್. - ಹಾಕಿತಿಲೋತ್ತಮಾ ಸೇನ್ - ಶೂಟಿಂಗ್ಆಕಾಶ್ ಮಣಿ - ಈಜುಶ್ರೀ ಹರಿ ನಟರಾಜ್ - ಈಜುದಕ್ಷಣ್ ಎಸ್. - ಈಜುಅನೀಶ್ ಗೌಡ - ಈಜುಯಶಸ್ವಿನಿ ಘೋರ್ಪಡೆ - ಟೇಬಲ್ ಟೆನ್ನಿಸ್ಸಿಂಧುಶ್ರೀ - ಅಥ್ಲೆಟಿಕ್ಸ್ದೀಪು ಮಲ್ಲೇಶ್ - ಸ್ಪೋರ್ಟ್ಸ್ ಕ್ಲೈಂಬಿಂಗ್

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande