ಫ್ರೀಡಂ ಪಾರ್ಕ್ನಲ್ಲಿ ಎನ್ಎಸ್ಯುಐ ಬೃಹತ್ ಪ್ರತಿಭಟನೆ
ಬೆಂಗಳೂರು, 06 ಅಕ್ಟೋಬರ್ (ಹಿ.ಸ.): ‘ವೋಟ್ ಚೋರಿ ನಿಲ್ಲಿಸಿ, ದೇಶ ಉಳಿಸಿ’ ಘೋಷಣೆಯೊಂದಿಗೆ ಎನ್ಎಸ್ಯುಐ ಕರ್ನಾಟಕ ವತಿಯಿಂದ ಮಂಗಳವಾರ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಚುನಾವಣಾ ಪ್ರಕ್ರಿಯೆಯಲ್ಲಿನ ಅಕ್ರಮಗಳ ಆರೋಪಗಳ ಹಿನ್ನೆಲೆಯಲ್ಲಿ
nsui-protest-vote-chori-stop-save-country-freedom-park-bengaluru


ಬೆಂಗಳೂರು, 06 ಅಕ್ಟೋಬರ್ (ಹಿ.ಸ.):

‘ವೋಟ್ ಚೋರಿ ನಿಲ್ಲಿಸಿ, ದೇಶ ಉಳಿಸಿ’ ಘೋಷಣೆಯೊಂದಿಗೆ ಎನ್ಎಸ್ಯುಐ ಕರ್ನಾಟಕ ವತಿಯಿಂದ ಮಂಗಳವಾರ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಚುನಾವಣಾ ಪ್ರಕ್ರಿಯೆಯಲ್ಲಿನ ಅಕ್ರಮಗಳ ಆರೋಪಗಳ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನಾಕಾರರು, ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ನ್ಯಾಯಸಮ್ಮತತೆ ಮತ್ತು ಹೊಣೆಗಾರಿಕೆಯನ್ನು ಖಚಿತಪಡಿಸಬೇಕು ಎಂದು ಒತ್ತಾಯಿಸಿದರು.

ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂಬ ಆರೋಪಗಳನ್ನು ಎನ್ಎಸ್ಯುಐ ಮುಖಂಡರು ಮುಂದಿಟ್ಟರು.

ಪ್ರತಿಭಟನೆಯಲ್ಲಿ ಎನ್ಎಸ್ಯುಐ ರಾಷ್ಟ್ರೀಯ ಅಧ್ಯಕ್ಷ ವಿನೋದ್ ಜಾಕಡ್, ಎಐಸಿಸಿ ಕಾರ್ಯದರ್ಶಿ ಗೋಪಿನಾಥ್, ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್, ವಿಧಾನ ಪರಿಷತ್ ಮಾಜಿ ಸದಸ್ಯ ನಾರಾಯಣಸ್ವಾಮಿ, ಬಿಎಂಟಿಸಿ ಅಧ್ಯಕ್ಷ ವಿ.ಎಸ್. ಆರಾಧ್ಯ ಸೇರಿದಂತೆ ವಿವಿಧ ಜಿಲ್ಲೆಗಳ ವಿದ್ಯಾರ್ಥಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

“ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಯಾರನ್ನೂ ಮತದಾನದ ಹಕ್ಕಿನಿಂದ ವಂಚಿಸಬಾರದು. ನ್ಯಾಯಯುತ ಹಾಗೂ ಪಾರದರ್ಶಕ ಚುನಾವಣೆ ನಡೆಯಬೇಕು. ತೆಗೆದುಹಾಕಿರುವ ಅರ್ಹ ಮತದಾರರ ಹೆಸರುಗಳನ್ನು ಮರುಸೇರಿಸಬೇಕು,” ಎಂದು ಗೋಪಿನಾಥ್ ಆಗ್ರಹಿಸಿದರು.

ಮತದಾರರ ಪಟ್ಟಿಗೆ ಸಂಬಂಧಿಸಿದ ಅಕ್ರಮಗಳ ಆರೋಪಗಳ ಕುರಿತು ಹೊಣೆಗಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಎನ್ಎಸ್ಯುಐ ರಾಷ್ಟ್ರೀಯ ಅಧ್ಯಕ್ಷ ವಿನೋದ್ ಜಾಕಡ್ ಒತ್ತಾಯಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande