ಬಿಜೆಪಿ ನಾಯಕರ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್; ಅಶ್ವತ್ಥ ನಾರಾಯಣ ಆಕ್ರೋಶ
ಬೆಂಗಳೂರು, 07 ಅಕ್ಟೋಬರ್ (ಹಿ.ಸ.): ರಾಜಧಾನಿಯ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿ ನಾಯಕರನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ಬರಹಗಳಿರುವ ಪೋಸ್ಟರ್ಗಳು ಕಾಣಿಸಿಕೊಂಡಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಮಲ್ಲೇಶ್ವರಂ 15ನೇ ಕ್ರಾಸ್ನ ಬಿಎಂಟಿಸಿ ಬಸ್ ನಿಲ್ದಾಣದ
English Slug: bjp-poster-war-in-bengaluru-ashwath-narayan-angry  ಕನ್ನಡ Short Description: ಬೆಂಗಳೂರಿನಲ್ಲಿ ಬಿಜೆಪಿ ನಾಯಕರ ವಿರುದ್ಧ ಆಕ್ಷೇಪಾರ್ಹ ಆರೋಪಗಳಿರುವ ಪೋಸ್ಟರ್ಗಳು ಕಾಣಿಸಿಕೊಂಡಿದ್ದು, ಮಾಜಿ ಸಚಿವ ಅಶ್ವತ್ಥ ನಾರಾಯಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಬೆಂಗಳೂರು, 07 ಅಕ್ಟೋಬರ್ (ಹಿ.ಸ.):

ರಾಜಧಾನಿಯ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿ ನಾಯಕರನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ಬರಹಗಳಿರುವ ಪೋಸ್ಟರ್ಗಳು ಕಾಣಿಸಿಕೊಂಡಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಮಲ್ಲೇಶ್ವರಂ 15ನೇ ಕ್ರಾಸ್ನ ಬಿಎಂಟಿಸಿ ಬಸ್ ನಿಲ್ದಾಣದ ಗೋಡೆ ಹಾಗೂ ಕಾಡುಮಲ್ಲೇಶ್ವರ ದೇವಸ್ಥಾನದ ಪಕ್ಕದ ಕಾಂಪೌಂಡ್ ಗೋಡೆಯ ಮೇಲೆ ಪೋಸ್ಟರ್ಗಳನ್ನು ಅಂಟಿಸಲಾಗಿದೆ.

ಪೋಸ್ಟರ್ಗಳಲ್ಲಿ ಬಿಜೆಪಿ ಶಾಸಕರು ವಿವಿಧ ಹಗರಣಗಳಲ್ಲಿ ಭಾಗಿಯಾಗಿದ್ದಾರೆ ಎಂಬ ರೀತಿಯ ಆರೋಪಗಳನ್ನು ಮಾಡಲಾಗಿದೆ ಎನ್ನಲಾಗಿದ್ದು, ಇದಕ್ಕೆ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಸಿ.ಎನ್. ಅಶ್ವತ್ಥ ನಾರಾಯಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜಕೀಯವಾಗಿ ಎದುರಿಸಲು ಸಾಧ್ಯವಾಗದೆ ಈ ರೀತಿಯ ಪೋಸ್ಟರ್ಗಳ ಮೂಲಕ ಬಿಜೆಪಿ ನಾಯಕರನ್ನು ಅವಹೇಳನ ಮಾಡಲಾಗುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

ಪೋಸ್ಟರ್ಗಳನ್ನು ಯಾರೂ ಗಮನಿಸದಂತೆ ಮಧ್ಯರಾತ್ರಿ ವೇಳೆ ಅಂಟಿಸಿರುವ ಶಂಕೆ ವ್ಯಕ್ತವಾಗಿದ್ದು, ಬೆಳಿಗ್ಗೆ ಸಾರ್ವಜನಿಕರ ಗಮನಕ್ಕೆ ಬಂದ ಬಳಿಕ ಸ್ಥಳೀಯರು ಹಾಗೂ ಬಿಜೆಪಿ ಕಾರ್ಯಕರ್ತರು ಅವುಗಳನ್ನು ತೆರವುಗೊಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪೋಸ್ಟರ್ಗಳನ್ನು ಅಂಟಿಸಿದವರನ್ನು ಪತ್ತೆಹಚ್ಚಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

“ಬಿಜೆಪಿ ನಾಯಕರ ವಿರುದ್ಧ ಸುಳ್ಳು ಹಾಗೂ ಆಧಾರರಹಿತ ಆರೋಪಗಳನ್ನು ಮಾಡುವ ಮೂಲಕ ಸಾರ್ವಜನಿಕರಲ್ಲಿ ಗೊಂದಲ ಮೂಡಿಸುವ ಪ್ರಯತ್ನ ನಡೆಯುತ್ತಿದೆ.

ರಾಜಕೀಯವಾಗಿ ಎದುರಿಸುವ ಬದಲು ಇಂತಹ ಪೋಸ್ಟರ್ಗಳ ಮೊರೆ ಹೋಗಿರುವುದು ಖಂಡನೀಯ,” ಎಂದು ಅಶ್ವತ್ಥ ನಾರಾಯಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

--------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande