ಬಡ, ಮಧ್ಯಮ ವರ್ಗದವರ ಜೀವನ ದುಸ್ತರಗೊಳಿಸುವುದೇ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ: ಸಿ.ಟಿ. ರವಿ
ಬೆಂಗಳೂರು, 07 ಅಕ್ಟೋಬರ್ (ಹಿ.ಸ.): ಬಡವರ ಹಾಗೂ ಮಧ್ಯಮ ವರ್ಗದವರ ಜೀವನವನ್ನು ದುಸ್ತರಗೊಳಿಸುವುದೇ ಕಾಂಗ್ರೆಸ್ ಸರ್ಕಾರದ ಏಕೈಕ ಗ್ಯಾರಂಟಿ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಆರೋಪಿಸಿದ್ದಾರೆ. ಎಕ್ಸ್‌ನಲ್ಲಿ ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್ ಸರ್ಕಾರದ ಹಣಕಾಸು ವೈಫಲ್ಯದಿಂದ ಸರ್ಕಾರ
ಸಿ.ಟಿ.ರವಿ ಕಡತ ಚಿತ್ರ


ಬೆಂಗಳೂರು, 07 ಅಕ್ಟೋಬರ್ (ಹಿ.ಸ.):

ಬಡವರ ಹಾಗೂ ಮಧ್ಯಮ ವರ್ಗದವರ ಜೀವನವನ್ನು ದುಸ್ತರಗೊಳಿಸುವುದೇ ಕಾಂಗ್ರೆಸ್ ಸರ್ಕಾರದ ಏಕೈಕ ಗ್ಯಾರಂಟಿ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಆರೋಪಿಸಿದ್ದಾರೆ.

ಎಕ್ಸ್‌ನಲ್ಲಿ ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್ ಸರ್ಕಾರದ ಹಣಕಾಸು ವೈಫಲ್ಯದಿಂದ ಸರ್ಕಾರದ ಎಲ್ಲ ಹೊರೆಯೂ ಜನರ ಹೆಗಲಿಗೆ ಬೀಳುತ್ತಿದೆ ಎಂದು ಟೀಕಿಸಿದ್ದಾರೆ. ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 8 ರೂಪಾಯಿ ಹೆಚ್ಚಿಸಲು ಸರ್ಕಾರ ನಿರ್ಧರಿಸಿದ್ದು, ಮಧ್ಯಮ ವರ್ಗದ ಜನರು ಹಾಲು ಖರೀದಿಸುವುದೇ ಕಷ್ಟವಾಗುವಂತೆ ಸರ್ಕಾರ ಮಾಡಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಇತಿಹಾಸದಲ್ಲಿ ಯಾವ ಸರ್ಕಾರವೂ ಇಷ್ಟರಮಟ್ಟಿಗೆ ಹಾಲಿನ ದರ ಹೆಚ್ಚಿಸಿರಲಿಲ್ಲ. ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಈ ಸಾಧನೆಯನ್ನೂ ಮಾಡಿದೆ ಎಂದು ಸಿ.ಟಿ. ರವಿ ಟೀಕಿಸಿದ್ದಾರೆ. ಇದರ ಜತೆಗೆ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನೂ ಶೇ.10ರಿಂದ 13ರಷ್ಟು ಹೆಚ್ಚಿಸಲು ಸರ್ಕಾರ ಒಪ್ಪಿಗೆ ನೀಡಿದೆ ಎಂದು ಹೇಳಿದ್ದಾರೆ.

ಮಧ್ಯಮ ವರ್ಗದ ಜನರ ಬದುಕನ್ನು ದುರ್ಬರಗೊಳಿಸಿ, ಅವರು ಬೀದಿಗಿಳಿಯುವಂತೆ ಮಾಡದೆ ಕಾಂಗ್ರೆಸ್ ಸರ್ಕಾರ ವಿರಮಿಸುವುದಿಲ್ಲ ಎಂದು ಆರೋಪಿಸಿದ್ದಾರೆ.

ಬಸ್ ಪ್ರಯಾಣ ದರ, ವಿದ್ಯುತ್ ಶುಲ್ಕ, ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ, ಮೆಟ್ರೋ ಪ್ರಯಾಣ ದರ ಸೇರಿದಂತೆ ಎಲ್ಲವನ್ನೂ ಸರ್ಕಾರ ಏರಿಸಿದೆ ಎಂದು ಅವರು ಹೇಳಿದ್ದಾರೆ. ಅಧಿಕಾರದಿಂದ ಇಳಿಯುವ ಮುನ್ನ ಉಸಿರಾಡುವುದಕ್ಕೂ ತೆರಿಗೆ ವಿಧಿಸಿದರೆ ಆಶ್ಚರ್ಯವಿಲ್ಲ ಎಂದು ಸಿ.ಟಿ. ರವಿ ವ್ಯಂಗ್ಯವಾಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande