
ಮೈಸೂರು, 07 ಅಕ್ಟೋಬರ್ (ಹಿ.ಸ.):
ಮೈಸೂರು ದಸರಾ ಸಿದ್ಧತೆಗಳ ಪರಿಶೀಲನೆಯ ಭಾಗವಾಗಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಮಹಾರಾಜ ಕ್ರೀಡಾಂಗಣದಲ್ಲಿ ಆಯೋಜಿಸಲಾಗುವ ಆಹಾರ ಮೇಳದ ಆವರಣಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಸಾರ್ವಜನಿಕರಿಗೆ ರಕ್ಷಣೆ ನೀಡಲು ಸೂಕ್ತ ನೆರಳಿನ ವ್ಯವಸ್ಥೆ ಹಾಗೂ ಶುದ್ಧ ಕುಡಿಯುವ ನೀರು ಲಭ್ಯವಾಗುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.
ಆಹಾರ ಮೇಳದಲ್ಲಿ ಉತ್ಪತ್ತಿಯಾಗುವ ಹಸಿ ಮತ್ತು ಒಣ ಕಸವನ್ನು ಸ್ಥಳದಲ್ಲೇ ಬೇರ್ಪಡಿಸಿ, ವೈಜ್ಞಾನಿಕವಾಗಿ ಹಾಗೂ ಸರಿಯಾಗಿ ನಿರ್ವಹಣೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಆಹಾರ ಮೇಳಕ್ಕೆ ಆಗಮಿಸುವ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವುದು ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಶಾಸಕರಾದ ದರ್ಶನ್ ಧ್ರುವನಾರಾಯಣ್, ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ, ಶಿವಕುಮಾರ್, ಜಿಲ್ಲಾಧಿಕಾರಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.