ಹಾಲು, ಬಸ್ ದರ ಏರಿಕೆ ಕೈಬಿಡಿ: ಬಸವರಾಜ ಹೊರಟ್ಟಿ
ಬೆಂಗಳೂರು, 07 ಅಕ್ಟೋಬರ್ (ಹಿ.ಸ.): ಹಾಲು ಮತ್ತು ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾಪವನ್ನು ಕೈಬಿಡಬೇಕು ಹಾಗೂ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಅರ್ಹ ಬಡವರಿಗೆ ಮಾತ್ರ ಸೀಮಿತಗೊಳಿಸಬೇಕು ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಹಾಲಿನ ದರ ಹೆಚ್ಚಳದಿಂ
basavaraj-horatti-urges-karnataka-government-to-drop-milk-bus-fare-hike


ಬೆಂಗಳೂರು, 07 ಅಕ್ಟೋಬರ್ (ಹಿ.ಸ.):

ಹಾಲು ಮತ್ತು ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾಪವನ್ನು ಕೈಬಿಡಬೇಕು ಹಾಗೂ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಅರ್ಹ ಬಡವರಿಗೆ ಮಾತ್ರ ಸೀಮಿತಗೊಳಿಸಬೇಕು ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಹಾಲಿನ ದರ ಹೆಚ್ಚಳದಿಂದ ಈಗಾಗಲೇ ಬೆಲೆ ಏರಿಕೆಯ ಹೊರೆ ಹೊತ್ತಿರುವ ಜನಸಾಮಾನ್ಯರಿಗೆ ಮತ್ತಷ್ಟು ಆರ್ಥಿಕ ಸಂಕಷ್ಟ ಎದುರಾಗಬಹುದು.

ಇದೇ ವೇಳೆ ಬಸ್ ಪ್ರಯಾಣ ದರ ಹೆಚ್ಚಳವೂ ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕ ಸಾರಿಗೆಯನ್ನು ಅವಲಂಬಿಸಿರುವ ಜನರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ರಾಜ್ಯ ಸಚಿವ ಸಂಪುಟವು ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ಗೆ ₹8ರಷ್ಟು ಹೆಚ್ಚಿಸುವ ಪ್ರಸ್ತಾವನೆಗೆ ಒಪ್ಪಿಗೆ ನೀಡಿದ್ದು, ಬಸ್ ದರ ಪರಿಷ್ಕರಣೆ ಕುರಿತು ಚರ್ಚೆ ನಡೆಸಿದೆ. ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ.

“ಹಾಲು ಮತ್ತು ಬಸ್ ದರ ಏರಿಕೆಯ ಪ್ರಸ್ತಾಪವನ್ನು ಸರ್ಕಾರ ಕೈಬಿಡಬೇಕು. ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಆರ್ಥಿಕವಾಗಿ ಅಗತ್ಯವಿರುವ ಅರ್ಹ ಬಡವರಿಗೆ ಮಾತ್ರ ಸೀಮಿತಗೊಳಿಸುವ ಮೂಲಕ ಸರ್ಕಾರದ ಮೇಲಿನ ಆರ್ಥಿಕ ಹೊರೆ ಕಡಿಮೆ ಮಾಡಬೇಕು” ಎಂದು ಬಸವರಾಜ ಹೊರಟ್ಟಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande