
ಬೆಂಗಳೂರು, 07 ಅಕ್ಟೋಬರ್ (ಹಿ.ಸ.):
ರಸ್ತೆ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಾಫ್ ಹೆಲ್ಮೆಟ್ಗಳ ಬಳಕೆಗೆ ಕಡಿವಾಣ ಹಾಕಲು ಮುಂದಾಗಿದೆ.
ರಸ್ತೆ ಸುರಕ್ಷತಾ ಮಾನದಂಡಗಳಿಗೆ ಅನುಗುಣವಾಗಿರದ ಹಾಫ್ ಹೆಲ್ಮೆಟ್ಗಳ ಉತ್ಪಾದನೆ ಮತ್ತು ಮಾರಾಟವನ್ನೂ ನಿಯಂತ್ರಿಸುವ ಕುರಿತು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.
ಸಾರಿಗೆ ಸಚಿವ ಭೈರತಿ ಸುರೇಶ್ ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವುದಾಗಿ ತಿಳಿಸಿದ್ದಾರೆ.
ದ್ವಿಚಕ್ರ ವಾಹನ ಸವಾರರು ಸುರಕ್ಷತಾ ಮಾನದಂಡಗಳಿಗೆ ಅನುಗುಣವಾದ BIS/ISI ಪ್ರಮಾಣೀಕೃತ ಹೆಲ್ಮೆಟ್ಗಳನ್ನು ಬಳಸಬೇಕು. ಪ್ರಮಾಣೀಕರಣವಿಲ್ಲದ ಅಥವಾ ಕಳಪೆ ಗುಣಮಟ್ಟದ ಹೆಲ್ಮೆಟ್ಗಳ ತಯಾರಿಕೆ ಮತ್ತು ಮಾರಾಟದ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ವ್ಯವಸ್ಥೆ ಈಗಾಗಲೇ ಕೇಂದ್ರ ಮಟ್ಟದಲ್ಲಿದೆ.
ಸಾರಿಗೆ ಸಚಿವ ಭೈರತಿ ಸುರೇಶ್ ಅವರು, “ಹಾಫ್ ಹೆಲ್ಮೆಟ್ ಬ್ಯಾನ್ ಮಾಡಲು ನಿಯಮಗಳಲ್ಲಿ ಅವಕಾಶ ಇದೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ.
ಇಂತಹ ಹೆಲ್ಮೆಟ್ಗಳ ಉತ್ಪಾದನೆ ಮತ್ತು ಮಾರಾಟದ ಮೇಲೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R