ದೇಶದ ಪ್ರತಿಯೊಂದು ಜಿಲ್ಲೆಗೂ 5ಜಿ ಸೇವೆ ತಲುಪಿದೆ: ಪ್ರಧಾನಿ ಮೋದಿ
ನವದೆಹಲಿ, 08 ಅಕ್ಟೋಬರ್ (ಹಿ.ಸ.): ಭಾರತದಲ್ಲಿ 5ಜಿ ಜಾಲವು ದೇಶದ ಪ್ರತಿಯೊಂದು ಜಿಲ್ಲೆಗೂ ತಲುಪಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. ದೇಶದಲ್ಲಿ 5.5 ಲಕ್ಷಕ್ಕೂ ಹೆಚ್ಚು 5ಜಿ ಮೂಲ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, 2022ಕ್ಕೆ ಹೋಲಿಸಿದರೆ ಮೊಬೈಲ್ ಅಂತರ್ಜಾಲದ ವೇಗ 10 ಪಟ್ಟ
इंडिया मोबाइल कांग्रेस को संबोधित करते हुए प्रधानमंत्री नरेंन्द्र मोदी


ನವದೆಹಲಿ, 08 ಅಕ್ಟೋಬರ್ (ಹಿ.ಸ.):

ಭಾರತದಲ್ಲಿ 5ಜಿ ಜಾಲವು ದೇಶದ ಪ್ರತಿಯೊಂದು ಜಿಲ್ಲೆಗೂ ತಲುಪಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. ದೇಶದಲ್ಲಿ 5.5 ಲಕ್ಷಕ್ಕೂ ಹೆಚ್ಚು 5ಜಿ ಮೂಲ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, 2022ಕ್ಕೆ ಹೋಲಿಸಿದರೆ ಮೊಬೈಲ್ ಅಂತರ್ಜಾಲದ ವೇಗ 10 ಪಟ್ಟು ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.

ನವದೆಹಲಿ ಯಶೋಭೂಮಿಯಲ್ಲಿ ನಡೆದ ಇಂಡಿಯಾ ಮೊಬೈಲ್ ಕಾಂಗ್ರೆಸ್‌ನ 10ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಪ್ರಧಾನಿ ಮೋದಿ, ಒಂದು ದಶಕದ ಹಿಂದೆ ದೇಶದಲ್ಲಿ ಡಿಜಿಟಲ್ ಅಂತರ ದೊಡ್ಡ ಸವಾಲಾಗಿತ್ತು. ‘ಡಿಜಿಟಲ್ ಇಂಡಿಯಾ’ ಅಭಿಯಾನದ ಮೂಲಕ ಪರಿಸ್ಥಿತಿಯನ್ನು ಬದಲಾಯಿಸಲಾಗಿದೆ ಎಂದು ಹೇಳಿದರು.

ಇಂದು ದೇಶದ ಪ್ರತಿಯೊಂದು ಜಿಲ್ಲೆಗೂ 5ಜಿ ಸೇವೆ ತಲುಪಿದೆ. ಭಾರತದಲ್ಲಿ 5.50 ಲಕ್ಷಕ್ಕೂ ಹೆಚ್ಚು ಮೂಲ ಕೇಂದ್ರಗಳಿದ್ದು, ಅವುಗಳ ಮೂಲಕ 5ಜಿ ಜಾಲ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರಧಾನಿ ತಿಳಿಸಿದರು.

ದೂರಸಂಪರ್ಕ ಕ್ಷೇತ್ರದಲ್ಲಿನ ಕ್ರಾಂತಿಯಿಂದ ಗ್ರಾಮೀಣ ಪ್ರದೇಶಗಳ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಪಡೆಯಲು ಸಾಧ್ಯವಾಗುತ್ತಿದೆ. ದೇಶದಲ್ಲಿರುವ ವಿವಿಧ ಡಿಜಿಟಲ್ ಹಾಗೂ ಅಂತರ್ಜಾಲ ಆಧಾರಿತ ಶಿಕ್ಷಣ ವ್ಯವಸ್ಥೆಗಳೊಂದಿಗೆ 25 ಕೋಟಿ ವಿದ್ಯಾರ್ಥಿಗಳನ್ನು ಸಂಪರ್ಕಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಡಿಜಿಟಲ್ ಸಂಪರ್ಕವು ಶಿಕ್ಷಣ, ಆರೋಗ್ಯ ಮತ್ತು ಸರ್ಕಾರಿ ಸೇವೆಗಳಿಗೆ ವೇಗ ನೀಡುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಇದರಿಂದ ಜನರ ಜೀವನ ಮತ್ತಷ್ಟು ಸುಗಮವಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande