ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆ ವಿರುದ್ದ ಕರಾಳ ದಿನ:ಸಚಿವ ತಂಗಡಗಿ
ಬೆಂಗಳೂರು, 08 ಅಕ್ಟೋಬರ್ (ಹಿ.ಸ.): ಕೇಂದ್ರ ಸರ್ಕಾರದ ಸರ್ವಾಧಿಕಾರ, ದಬ್ಬಾಳಿಕೆ ಹಾಗೂ ಪ್ರಜಾಪ್ರಭುತ್ವ ವಿರೋಧಿ ನಡೆ ಖಂಡಿಸಿ ಕಾಂಗ್ರೆಸ್ ಕರೆ ನೀಡಿರುವ ‘ಪ್ರಜಾಪ್ರಭುತ್ವದ ಕರಾಳ ದಿನ’ ಆಚರಣೆಗೆ ರಾಜ್ಯ ಹಾಗೂ ದೇಶದ ನಾಗರಿಕರು ಕೈಜೋಡಿಸಬೇಕು ಎಂದು ಸಚಿವ ಶಿವರಾಜ್ ತಂಗಡಗಿ ಮನವಿ ಮಾಡಿದ್ದಾರೆ. ‘ಎಕ್ಸ್
ಸಚಿವ ಶಿವರಾಜ್ ತಂಗಡಗಿ  ಸಂಗ್ರಹ ಚಿತ್ರ


ಬೆಂಗಳೂರು, 08 ಅಕ್ಟೋಬರ್ (ಹಿ.ಸ.):

ಕೇಂದ್ರ ಸರ್ಕಾರದ ಸರ್ವಾಧಿಕಾರ, ದಬ್ಬಾಳಿಕೆ ಹಾಗೂ ಪ್ರಜಾಪ್ರಭುತ್ವ ವಿರೋಧಿ ನಡೆ ಖಂಡಿಸಿ ಕಾಂಗ್ರೆಸ್ ಕರೆ ನೀಡಿರುವ ‘ಪ್ರಜಾಪ್ರಭುತ್ವದ ಕರಾಳ ದಿನ’ ಆಚರಣೆಗೆ ರಾಜ್ಯ ಹಾಗೂ ದೇಶದ ನಾಗರಿಕರು ಕೈಜೋಡಿಸಬೇಕು ಎಂದು ಸಚಿವ ಶಿವರಾಜ್ ತಂಗಡಗಿ ಮನವಿ ಮಾಡಿದ್ದಾರೆ.

‘ಎಕ್ಸ್‌’ನಲ್ಲಿ ಹೇಳಿಕೆ ನೀಡಿರುವ ಅವರು, ಮತಗಳ್ಳತನದ ವಿರುದ್ಧ ಧ್ವನಿ ಎತ್ತಿ, ಮತದಾರರ ಹಕ್ಕು ಹಾಗೂ ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆಗಾಗಿ ಒತ್ತಾಯಿಸಿದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಇಂಡಿಯಾ ಕೂಟದ ನಾಯಕರನ್ನು ತಡೆದು, ಬಂಧಿಸಿ, ದೈಹಿಕ ಹಿಂಸೆ ನೀಡಿರುವುದು ಅತ್ಯಂತ ಹೀನ ನಡೆ ಎಂದು ಆರೋಪಿಸಿದ್ದಾರೆ.

ಮತಗಳ್ಳತನ, ಎಸ್‌ಐಆರ್‌ ಅಕ್ರಮ, ಚುನಾವಣಾ ಆಯೋಗದ ದುರ್ಬಳಕೆ ಹಾಗೂ ಮತದಾರರ ಹಕ್ಕುಗಳ ಹರಣದ ವಿರುದ್ಧ ಪ್ರಜಾಸತ್ತಾತ್ಮಕವಾಗಿ ನಡೆಯುತ್ತಿದ್ದ ಹೋರಾಟದ ಮೇಲೆ ಬಲಪ್ರಯೋಗ ಮಾಡಲಾಗಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ದೊಡ್ಡ ದಾಳಿ ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆ ಹಾಗೂ ಪ್ರಜಾಪ್ರಭುತ್ವ ವಿರೋಧಿ ನೀತಿ ವಿರುದ್ಧ ಕಾಂಗ್ರೆಸ್ ಕರೆ ನೀಡಿರುವ ‘ಪ್ರಜಾಪ್ರಭುತ್ವದ ಕರಾಳ ದಿನ’ ಪ್ರತಿಭಟನೆಗೆ ದೇಶಾದ್ಯಂತ ವ್ಯಾಪಕ ಜನಬೆಂಬಲ ವ್ಯಕ್ತವಾಗಿದೆ ಎಂದು ತಂಗಡಗಿ ತಿಳಿಸಿದ್ದಾರೆ.

ರಾಜ್ಯದಾದ್ಯಂತ ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ಮತದಾರರ ಹಕ್ಕುಗಳ ರಕ್ಷಣೆಗಾಗಿ ಧ್ವನಿ ಮತ್ತಷ್ಟು ಗಟ್ಟಿಯಾಗಲಿದೆ. ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾಪ್ರಭುತ್ವ ಉಳಿಸುವ ಈ ಜನಪರ ಆಂದೋಲನದಲ್ಲಿ ಎಲ್ಲ ನಾಗರಿಕರು ಜೊತೆಯಾಗಬೇಕು ಎಂದು ಸಚಿವ ಶಿವರಾಜ್ ತಂಗಡಗಿ ಮನವಿ ಮಾಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande