ಕುರೇಕುಪ್ಪ ವ್ಯಕ್ತಿ ಕಾಣೆ: ಪತ್ತೆಗೆ ಮನವಿ
ತೋರಣಗಲ್ಲು, 08 ಅಕ್ಟೋಬರ್ (ಹಿ.ಸ.) ಸಂಡೂರು ತಾಲೂಕಿನ ಕುರೇಕುಪ್ಪ ಗ್ರಾಮದ 06ನೇ ವಾರ್ಡ್ ನಿವಾಸಿಯಾದ ವಿಶ್ವನಾಥ ಎಸ್ ಆಚಾರಿ (41) ಅ.01 ರಂದು ಮನೆಯಿಂದ ನಾಪತ್ತೆಯಾಗಿರುವ ಕುರಿತು ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ
ಕುರೇಕುಪ್ಪ ವ್ಯಕ್ತಿ ಕಾಣೆ: ಪತ್ತೆಗೆ ಮನವಿ


ತೋರಣಗಲ್ಲು, 08 ಅಕ್ಟೋಬರ್ (ಹಿ.ಸ.)

ಸಂಡೂರು ತಾಲೂಕಿನ ಕುರೇಕುಪ್ಪ ಗ್ರಾಮದ 06ನೇ ವಾರ್ಡ್ ನಿವಾಸಿಯಾದ ವಿಶ್ವನಾಥ ಎಸ್ ಆಚಾರಿ (41) ಅ.01 ರಂದು ಮನೆಯಿಂದ ನಾಪತ್ತೆಯಾಗಿರುವ ಕುರಿತು ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.

ಚಹರೆ ಗುರುತು:

ಎತ್ತರ 5.5 ಅಡಿ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದಾನೆ. ಮನೆಯಿಂದ ಹೊರಡುವಾಗ ಕಿತ್ತಳೇ ಬಣ್ಣದ ಟಿ-ಶರ್ಟ್ ಹಾಗೂ ನೀಲಿ ಬಣ್ಣದ ಜಿನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡುತ್ತಾನೆ.

ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಅಥವಾ ಸುಳಿವು ಲಭ್ಯ ಆದಲ್ಲಿ ತೋರಣಗಲ್ಲು ಪೊಲೀಸ್ ಠಾಣೆಯ ದೂ.08395-250100, ಮೊ.9480803062, ಅಥವಾ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande