ಬರ ಪರಿಸ್ಥಿತಿ ಮತ್ತು ನಿರ್ವಹಣೆಯ ಪ್ರಗತಿ ಪರಿಶೀಲನಾ ಸಭೆ
ಕೊಪ್ಪಳ, 08 ಅಕ್ಟೋಬರ್ (ಹಿ.ಸ.): ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಅವರು ಇಂದು, ಕೊಪ್ಪಳ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಕೊಪ್ಪಳ‌ ಮತ್ತು ರಾಯಚೂರು ಜಿಲ್ಲೆಗಳ ಬರ ಪರಿಸ್ಥಿತಿ ಮತ್ತು ನಿರ್ವಹಣೆಗೆ ಕೈಗೊಂಡಿರುವ ಕ್ರಮದ ಕುರಿತು ಪ್ರಗತಿ‌ ಪರಿಶೀಲನಾ ಸಭೆ ನಡೆಸಿದರು. ಈ ವೇಳೆ ಕುಡಿಯುವ ನೀರು, ಜಾನ
ಬರ ಪರಿಸ್ಥಿತಿ ಮತ್ತು ನಿರ್ವಹಣೆಯ ಪ್ರಗತಿ ಪರಿಶೀಲನಾ ಸಭೆ


ಕೊಪ್ಪಳ, 08 ಅಕ್ಟೋಬರ್ (ಹಿ.ಸ.):

ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಅವರು ಇಂದು, ಕೊಪ್ಪಳ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಕೊಪ್ಪಳ‌ ಮತ್ತು ರಾಯಚೂರು ಜಿಲ್ಲೆಗಳ ಬರ ಪರಿಸ್ಥಿತಿ ಮತ್ತು ನಿರ್ವಹಣೆಗೆ ಕೈಗೊಂಡಿರುವ ಕ್ರಮದ ಕುರಿತು ಪ್ರಗತಿ‌ ಪರಿಶೀಲನಾ ಸಭೆ ನಡೆಸಿದರು.

ಈ ವೇಳೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು, ಜನರು ಗುಳೆ ಹೋಗುವುದನ್ನು ತಪ್ಪಿಸಲು ಉದ್ಯೋಗ ಕಲ್ಪಿಸುವುದು ಮತ್ತು ಸಂಕಷ್ಟದಲ್ಲಿರುವ ರೈತರಿಗೆ ಅಗತ್ಯ ನೆರವು ನೀಡುವ ವಿಚಾರಗಳ ಮಾಹಿತಿ‌ ಪಡೆದು, ಅಧಿಕಾರಿಗಳಿಗೆ ಅಗತ್ಯ‌ ಸೂಚನೆ ನೀಡಿದರು.

ಸಭೆಯಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಹೆಚ್.ತಂಗಡಗಿ, ಶಾಸಕರಾದ ರಾಘವೇಂದ್ರ ಹಿಟ್ನಾಳ್, ಕೊಪ್ಪಳ ಜಿಲ್ಲಾಧಿಕಾರಿ ಸುರೇಶ್ ಹಿಟ್ನಾಳ್, ರಾಯಚೂರು ಜಿಲ್ಲಾಧಿಕಾರಿ ಪೂವಿತಾ, ಕೊಪ್ಪಳ ಜಿಲ್ಲಾ ಪಂಚಾಯತ್ ಸಿಇಒ ವರ್ಣೀತ್ ನೇಗಿ, ರಾಯಚೂರು ಜಿಲ್ಲಾ ಪಂಚಾಯತ್ ಸಿಇಒ ಈಶ್ವರ್ ಕುಮಾರ್ ಕಾಂದೂ ಅವರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande