2023ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ: ಆಕ್ಷೇಪಣೆಗೆ ಅವಕಾಶ
ಬಳ್ಳಾರಿ, 08 ಅಕ್ಟೋಬರ್ (ಹಿ.ಸ.) ಸಾರ್ವಜನಿಕ ಗ್ರಂಥಾಲಯ ಇಲಾಖೆಯು 2023ನೇ ಸಾಲಿನಲ್ಲಿ ಮುದ್ರಣಗೊಂಡು, ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸ್ವೀಕರಿಸಲಾದ ಪುಸ್ತಕಗಳ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಆಯ್ಕೆಯಾದ ಮತ್ತು ಆಯ್ಕೆಯಾಗದ ಪುಸ್ತಕಗಳ ಸಾರ್ವಜನಿಕ ಪ್ರದರ್ಶನ ಹಾಗೂ ಆ
2023ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ: ಆಕ್ಷೇಪಣೆಗೆ ಅವಕಾಶ


ಬಳ್ಳಾರಿ, 08 ಅಕ್ಟೋಬರ್ (ಹಿ.ಸ.)

ಸಾರ್ವಜನಿಕ ಗ್ರಂಥಾಲಯ ಇಲಾಖೆಯು 2023ನೇ ಸಾಲಿನಲ್ಲಿ ಮುದ್ರಣಗೊಂಡು, ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸ್ವೀಕರಿಸಲಾದ ಪುಸ್ತಕಗಳ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಆಯ್ಕೆಯಾದ ಮತ್ತು ಆಯ್ಕೆಯಾಗದ ಪುಸ್ತಕಗಳ ಸಾರ್ವಜನಿಕ ಪ್ರದರ್ಶನ ಹಾಗೂ ಆಕ್ಷೇಪಣೆಗಳ ಸಲ್ಲಿಕೆಗೆ ದಿನಾಂಕಗಳನ್ನು ನಿಗದಿಪಡಿಸಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತರಾದ ವಿದ್ಯಾಕುಮಾರಿ ಕೆ. ತಿಳಿಸಿದ್ದಾರೆ.

*ಪುಸ್ತಕಗಳ ಪ್ರದರ್ಶನ:*

ಆಯ್ಕೆಯಾದ ಮತ್ತು ಆಯ್ಕೆಯಾಗದ ಪುಸ್ತಕಗಳ ಪ್ರದರ್ಶನವನ್ನು 2026 ರ ಅಕ್ಟೋಬರ್ 12 ರಿಂದ 14 ರವರೆಗೆ ಮೂರು ದಿನಗಳ ಕಾಲ ಬೆಳಿಗ್ಗೆ 10 ರಿಂದ ಸಂಜೆ 5:30 ರವರೆಗೆ ಬೆಂಗಳೂರಿನ ವಿಜಯನಗರದಲ್ಲಿರುವ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಹತ್ತಿರ ‘ಡಾ. ವಿಷ್ಣುವರ್ಧನ ಸ್ಮಾರಕ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರ'ದ ಗ್ರಂಥಾಲಯ ಸಭಾಂಗಣದಲ್ಲಿ (ನೆಲ ಮಹಡಿ) ಏರ್ಪಡಿಸಲಾಗಿದೆ.

ಅಲ್ಲದೆ, ಆಯ್ಕೆಯಾದ ಎಲ್ಲಾ ಭಾಷೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರಾಜ್ಯದ ಎಲ್ಲಾ ಜಿಲ್ಲಾ ಮತ್ತು ನಗರ ಕೇಂದ್ರ ಗ್ರಂಥಾಲಯಗಳ ಕಚೇರಿಗಳಲ್ಲಿ ಪ್ರದರ್ಶಿಸಲಾಗುತ್ತದೆ. ಸಾರ್ವಜನಿಕರು ಹಾಗೂ ಲೇಖಕರು ಇಲಾಖೆಯ ಅಧಿಕೃತ ವೆಬ್ಸೈಟ್ ಜಠಿಟ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲೂ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.

ಆಕ್ಷೇಪಣೆ ಸಲ್ಲಿಕೆಗೆ ಅವಕಾಶ:

ಪುಸ್ತಕ ಆಯ್ಕೆಗೆ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಹಾಗೂ ಪುಸ್ತಕ ಮಾರಾಟಗಾರರು ಯಾವುದೇ ಆಕ್ಷೇಪಣೆಗಳಿದ್ದಲ್ಲಿ 2026 ರ ಅಕ್ಟೋಬರ್ 12 ರಿಂದ ಅಕ್ಟೋಬರ್ 22 ರ ವರೆಗೆ ಬೆಳಿಗ್ಗೆ 10 ರಿಂದ ಸಂಜೆ 5:30 ರ ಒಳಗಾಗಿ ತಮ್ಮ ಲಿಖಿತ ಮನವಿಗಳನ್ನು ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು – 560001 ಇಲ್ಲಿಗೆ ಸಲ್ಲಿಸಬೇಕಾಗಿದೆ.

ಅಂತಿಮ ದಿನಾಂಕದ ನಂತರ ಬರುವ ಯಾವುದೇ ಮನವಿಗಳನ್ನು ಅಥವಾ ಆಕ್ಷೇಪಣೆಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸುವುದಿಲ್ಲ ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತರಾದ ವಿದ್ಯಾಕುಮಾರಿ ಕೆ. ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande