ಎಸ್.ಎಸ್. ಕಡಪಟ್ಟಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ
ಬಾಗಲಕೋಟೆ , 09 ಅಕ್ಟೋಬರ್ (ಹಿ.ಸ.) ದೇಶದ ಪ್ರಧಾನ ಸೇವಕ, ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಇಳಕಲ್ಲ ನಗರದ ಎಸ್.ಎಸ್. ಕಡಪಟ್ಟಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಸಾಮಾಜಿಕ ಕಳಕಳಿ ಹಾಗೂ ಸೇವಾ ಮನೋಭಾವದೊಂದಿಗೆ ನಡೆದ ಶಿಬಿರದಲ್ಲಿ ಹಲವು ಮಂದಿ ರಕ್ತದಾನ ಮಾಡುವ
Blood donate


ಬಾಗಲಕೋಟೆ , 09 ಅಕ್ಟೋಬರ್ (ಹಿ.ಸ.)

ದೇಶದ ಪ್ರಧಾನ ಸೇವಕ, ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಇಳಕಲ್ಲ ನಗರದ ಎಸ್.ಎಸ್. ಕಡಪಟ್ಟಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಸಾಮಾಜಿಕ ಕಳಕಳಿ ಹಾಗೂ ಸೇವಾ ಮನೋಭಾವದೊಂದಿಗೆ ನಡೆದ ಶಿಬಿರದಲ್ಲಿ ಹಲವು ಮಂದಿ ರಕ್ತದಾನ ಮಾಡುವ ಮೂಲಕ ಮಾನವೀಯ ಸೇವೆಗೆ ಕೈಜೋಡಿಸಿದರು.

ಕಾರ್ಯಕ್ರಮದಲ್ಲಿ ಆಸ್ಪತ್ರೆಯ ವ್ಯವಸ್ಥಾಪಕರು ಹಾಗೂ ಖ್ಯಾತ ವೈದ್ಯರಾದ ಡಾ. ಮಹಾಂತೇಶ ಕಡಪಟ್ಟಿ ಅವರು ಮಾತನಾಡಿ, ರಕ್ತದಾನವು ಅತ್ಯಂತ ಮಹತ್ವದ ಮಾನವೀಯ ಸೇವೆಯಾಗಿದೆ ಎಂದು ತಿಳಿಸಿದರು. ಅಪಘಾತ, ಶಸ್ತ್ರಚಿಕಿತ್ಸೆ, ತುರ್ತು ಚಿಕಿತ್ಸೆ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ ಎದುರಾಗುತ್ತದೆ. ಹೀಗಾಗಿ ಆರೋಗ್ಯವಂತರು ಸ್ವಯಂಪ್ರೇರಣೆಯಿಂದ ರಕ್ತದಾನ ಮಾಡುವ ಮೂಲಕ ಅಗತ್ಯವಿರುವವರ ಜೀವ ಉಳಿಸುವ ಕಾರ್ಯದಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.

ರಕ್ತದಾನದಿಂದ ಸಮಾಜಕ್ಕೆ ದೊರೆಯುವ ಪ್ರಯೋಜನಗಳು, ರಕ್ತದ ಅವಶ್ಯಕತೆ ಇರುವ ಸಂದರ್ಭಗಳಲ್ಲಿ ರಕ್ತದ ಲಭ್ಯತೆಯ ಮಹತ್ವ ಹಾಗೂ ಸಾರ್ವಜನಿಕರಲ್ಲಿ ರಕ್ತದಾನದ ಕುರಿತು ಜಾಗೃತಿ ಮೂಡಿಸುವ ಅಗತ್ಯದ ಬಗ್ಗೆ ಅವರು ವಿವರಿಸಿದರು. ರಕ್ತದಾನ ಶಿಬಿರಗಳ ಮೂಲಕ ಯುವಜನರು ಹಾಗೂ ಸಾರ್ವಜನಿಕರಲ್ಲಿ ಸೇವಾ ಮನೋಭಾವ ಬೆಳೆಸುವುದು ಅಗತ್ಯವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರದ ಮಾಜಿ ಶಾಸಕರಾದ ದೊಡ್ಡನಗೌಡ ಜಿ. ಪಾಟೀಲ ಅವರು ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ರಕ್ತದಾನವು ಯಾವುದೇ ಪ್ರತಿಫಲ ನಿರೀಕ್ಷಿಸದೆ ಮತ್ತೊಬ್ಬರ ಜೀವ ಉಳಿಸಲು ನೆರವಾಗುವ ಮಹತ್ವದ ಸೇವೆಯಾಗಿದ್ದು, ಇಂತಹ ಸಮಾಜಮುಖಿ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ನಗರಮಂಡಲ ಅಧ್ಯಕ್ಷ ಅರವಿಂದ ಮಂಗಳೂರು, ಗ್ರಾಮೀಣ ಮಂಡಲ ಅಧ್ಯಕ್ಷ ಮಹಾಂತಗೌಡ ಪಾಟೀಲ (ತೊಂಡಿಹಾಳ) ಸೇರಿದಂತೆ ಬಿಜೆಪಿ ಪಕ್ಷದ ಹಿರಿಯ ಮುಖಂಡರಾದ ಶಾಮ್ ಕಾರವಾ, ರಾಜು ನಾಡಗೌಡ, ಮಂಜುನಾಥ ಶೆಟ್ಟರ, ರಾಮನಗೌಡ ಬೆಳ್ಳಿಹಾಳ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande