
ಬೆಂಗಳೂರು, 09 ಅಕ್ಟೋಬರ್ (ಹಿ.ಸ.):
ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿ ಹುದ್ದೆ ಸಹಿತ 25 ವರ್ಷಗಳ ಸಾರ್ವಜನಿಕ ಸೇವೆಯನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ ಹೆಬ್ಬಾಳ ಬಿಜೆಪಿವತಿಯಿಂದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಹಾಗೂ ಮಾಜಿ ಶಾಸಕ ಡಾ ವೈ.ಎ.ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ನಾಗಶೆಟ್ಟಿಹಳ್ಳಿಯ ಬಸವೇಶ್ವರ ಬಡಾವಣೆಯ ಸ್ಮಶಾನ ಸ್ವಚ್ಚಗೊಳಿಸುವ ಕಾರ್ಯ ನಡೆಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಗೌರವಾರ್ಥ
ಸೇವಾ ಸಂಕಲ್ಪ ಅಭಿಯಾನ ಹೆಸರಿನಲ್ಲಿ ಹೆಬ್ಬಾಳ ವಿಧಾನಸಭಾ ಕ್ಷೇತ್ರದ
ಬಿಜೆಪಿಯ ನೂರಾರು ಮಂದಿ ಕಾರ್ಯಕರ್ತರು ಬೆಳಿಗ್ಗೆ ಎಂಟುಗಂಟೆಯಿಂದ ಹತ್ತು ಗಂಟೆ ತನಕ ಸ್ಮಶಾನ ಸ್ಚಚ್ಷಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿಯಾಗಿ ಯಾವುದೇ ಹಗರಣವಿಲ್ಲದೆ 25 ವರ್ಷಗಳ ಸಾರ್ವಜನಿಕ ಜೀವನ ಪೂರ್ಣಗೊಳಿಸಿದ್ದಾರೆ ದೇಶದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಅವರ ಸೇವೆಯನ್ನು ಕೊಂಡಾಡಿದರು.
ಹೆಬ್ಬಾಳ ಮಾಜಿ ಶಾಸಕ ಡಾ ವೈ.ಎ.ನಾರಾಯಣಸ್ವಾಮಿ ಮಾತನಾಡಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬೃಷ್ಟಾಚಾರ ರಹಿತವಾಗಿ ಇಪ್ಪತೈದು ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಘನತೆ ಗೌರವ ಸಿಗುವಂತೆ ಮಾಡಿದ್ದಾರೆ. ದೇಶದ ಸಮಗ್ರ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ ಅವರ ಸೇವೆಯನ್ನು ಸ್ಮರಿಸಿ ಹೆಬ್ಬಾಳ ವಿಧಾನಸಭಾ ಕ್ಷೇತ್ರವ್ಯಾಪ್ತಿಯ ನಾಗಶೆಟ್ಟಿಹಳ್ಳಿಯ ಬಸವೇಶ್ವರ ಬಡಾವಣೆಯ ಸ್ಮಶಾನ ಸ್ವಚ್ಚತೆ ಕಾರ್ಯಕ್ರಮ ನಡೆಸಿದ್ದೇವೆ ಎಂದರು.
ಬಿಜೆಪಿ ನಾಯಕರಾದ, ಬಿ.ನಾರಾಯಣ, ಸಿ.ಮುನಿಕೃಷ್ಣ, ರಿಷಿಕುಮಾರ್, ಡೈರಿ ರಾಜಣ್ಣ, ಎಸ್.ಎಸ್.ಪಾಟೀಲ್, ರವೀಂದ್ರಕುಮಾರ್, ಶ್ರೀನಿವಾಸರಾಜು, ಕೇಶವಮೂರ್ತಿ, ಮಂಜುನಾಥ್, ಎಲ್.ಗೋಪಾಲ್, ವಿವೇಕಾನಂದಶೆಟ್ಟಿ, ಸಿದ್ದರಾಜು, ರೇಣುಕಾಮೂರ್ತಿ, ರವಿಕುಮಾರ್ ಹಾಗೂ ಜೆಡಿಎಸ್ ನಾಯಕ ಚಂದ್ರಶೇಖರ್ ಹಾಜರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.