ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ: ಡಾ. ಮರಿಯಂಬಿ ವಿ.ಕೆ
ಬಳ್ಳಾರಿ, 09 ಅಕ್ಟೋಬರ್ (ಹಿ.ಸ.) ವಯಸ್ಸಾದಂತೆ ಕಣ್ಣಿನ ಪರೆ, ಕಿವುಡುತನ, ರಕ್ತದೊತ್ತಡ, ಮಧುಮೇಹ, ಖಿನ್ನತೆ, ಬುದ್ಧಿಮಾಂದ್ಯತೆ, ನರಗಳ ಸಮಸ್ಯೆ, ಹೃದ್ರೋಗ, ಲಕ್ವ, ಮೂಳೆ ಮುರಿತ, ಅನಿಯಂತ್ರಿತ ಮೂತ್ರ ವಿಸರ್ಜನೆ ಹಾಗೂ ಮಲಬದ್ಧತೆಯಂತಹ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದ್ದು ತಕ್ಷಣವೇ ವೈದ್ಯರನ್ನು
ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ: ಡಾ. ಮರಿಯಂಬಿ ವಿ.ಕೆ


ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ: ಡಾ. ಮರಿಯಂಬಿ ವಿ.ಕೆ


ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ: ಡಾ. ಮರಿಯಂಬಿ ವಿ.ಕೆ


ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ: ಡಾ. ಮರಿಯಂಬಿ ವಿ.ಕೆ


ಬಳ್ಳಾರಿ, 09 ಅಕ್ಟೋಬರ್ (ಹಿ.ಸ.)

ವಯಸ್ಸಾದಂತೆ ಕಣ್ಣಿನ ಪರೆ, ಕಿವುಡುತನ, ರಕ್ತದೊತ್ತಡ, ಮಧುಮೇಹ, ಖಿನ್ನತೆ, ಬುದ್ಧಿಮಾಂದ್ಯತೆ, ನರಗಳ ಸಮಸ್ಯೆ, ಹೃದ್ರೋಗ, ಲಕ್ವ, ಮೂಳೆ ಮುರಿತ, ಅನಿಯಂತ್ರಿತ ಮೂತ್ರ ವಿಸರ್ಜನೆ ಹಾಗೂ ಮಲಬದ್ಧತೆಯಂತಹ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದ್ದು ತಕ್ಷಣವೇ ವೈದ್ಯರನ್ನು ಸಂಪರ್ಕ ಮಾಡಬೇಕು ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮರಿಯಂಬಿ ವಿ.ಕೆ ಅವರು ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಮಗ್ರ ಸಾಮಾಜಿಕ ಮತ್ತು ನೈತಿಕ ಅಭಿವೃದ್ಧಿ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ನಗರದ ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಶುಕ್ರವಾರ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎಲ್ಲಾ ಕಾಯಿಲೆಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಚಿಕಿತ್ಸೆ ಲಭ್ಯವಿದೆ. ಯಾರೇ ಆಗಲಿ ನಿರ್ಲಕ್ಷ್ಯವನ್ನು ತೋರಿಸದೇ ತಪಾಸಣೆ ಮಾಡಿಸಿಕೊಳ್ಳಬೇಕು. ಹಿರಿಯರು ಲಘು ನಡಿಗೆ, ನಿಯಮಿತ ವ್ಯಾಯಾಮ, ಸೂಕ್ತ ನಿದ್ರೆ ಹಾಗೂ ಪೌಷ್ಟಿಕ ಸಸ್ಯಾಹಾರಿ ಆಹಾರ ಸೇವಿಸಬೇಕು ಎಂದರು.

‘ಗೌರವಯುತ ವೃದ್ಧಾಪ್ಯ: ಹಿರಿಯ ನಾಗರಿಕರಿಗಾಗಿ ಆರೈಕೆ ಮತ್ತು ಬೆಂಬಲ ವ್ಯವಸ್ಥೆಗಳ ಬಲವರ್ಧನೆ’ ಎಂಬ ಘೋಷೆಣೆಯೊಂದಿಗೆ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಡಾ. ಜಬೀನ ತಾಜ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ರಾಷ್ಟ್ರೀಯ ವಯೋವೃದ್ಧರ ಕ್ಷೇಮಾಭಿವೃದ್ಧಿ ಕಾರ್ಯಕ್ರಮವು ಇಲಾಖೆಯ ಪ್ರಮುಖ ಯೋಜನೆಯಾಗಿದೆ. ಸಮಾಜದಲ್ಲಿ ವೃದ್ಧರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅವರಲ್ಲಿ ಕಂಡುಬರುವ ಸಾಂಕ್ರಾಮಿಕ ಹಾಗೂ ಅಸಾಂಕ್ರಾಮಿಕ ರೋಗಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ತಪಾಸಣೆ ಮತ್ತು ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಹಿರಿಯರು ಈ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande