
ಬಳ್ಳಾರಿ, 09 ಅಕ್ಟೋಬರ್ (ಹಿ.ಸ.)
ನಗರದ 20 ಪರೀಕ್ಷಾ ಕೇಂದ್ರಗಳಲ್ಲಿ ಅ.11 ರಂದು ಬೆಳಿಗ್ಗೆ 10 ರಿಂದ ಮಧ್ಯಾನ್ 01 ಗಂಟೆಯವರೆಗೆ ಕರ್ನಾಟಕ ಪರಿಕ್ಷಾ ಪ್ರಾಧಿಕಾರದಿಂದ ನಡೆಯುವ ಕೆ-ಸೆಟ್ (ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ) ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ. ವ್ಯಾಪ್ತಿಯ ಪ್ರದೇಶವನ್ನು ನಿರ್ಭಂದಿತ ಪ್ರದೇಶ ಎಂದು ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಆದೇಶಿಸಿದ್ದಾರೆ.
ಸುಗಮ ಮತ್ತು ಪಾರದರ್ಶಕ ನಿರ್ವಹಣೆಗಾಗಿ, ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ರ ಅಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಈ ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಸಮಯದಲ್ಲಿ ಈ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಮತ್ತು ಇಂಟರ್ನೆಟ್ ಸೆಂಟರ್ ಗಳನ್ನು ಕಡ್ಡಾಯವಾಗಿ ಮುಚ್ಚುವಂತೆ, ಅನಧಿಕೃತ ವ್ಯಕ್ತಿಗಳು ಮತ್ತು ಗುಂಪುಗಳು ಪರೀಕ್ಷಾ ಕೇಂದ್ರದ ಹತ್ತಿರ ಸುಳಿಯುವುದನ್ನು ಕಟ್ಟುನಿಟ್ಟಾಗಿ ನಿಷೆಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ನಿಷೇಧಾಜ್ಞೆಯು ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿ, ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್