
ಬಳ್ಳಾರಿ, 09 ಅಕ್ಟೋಬರ್ (ಹಿ.ಸ.)
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಅಕ್ಟೋಬರ್ 11 ರ ಭಾನುವಾರದಂದು ನಡೆಯಲಿದ್ದು, ಜಿಲ್ಲಾಡಳಿತ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆಗಳನ್ನು ಕೈಗೊಂಡಿದೆ.
ಬಳ್ಳಾರಿ ನಗರದ ಒಟ್ಟು 20 ಪರೀಕ್ಷಾ ಕೇಂದ್ರಗಳಲ್ಲಿ ಅಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಪತ್ರಿಕೆ-1 ಮತ್ತು ಪತ್ರಿಕೆ-2 ರ ಪರೀಕ್ಷೆಗಳು ಜರುಗಲಿದ್ದು, ಒಟ್ಟು 10,422 ಅಭ್ಯರ್ಥಿಗಳು ಹಾಜರಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.
ಅಭ್ಯರ್ಥಿಗಳಿಗೆ ಉಚಿತ ವಸತಿ ಸೌಲಭ್ಯ:*
ಹೊರಗಿನಿಂದ ಆಗಮಿಸುವ ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವಂತೆ ಜಿಲ್ಲಾಡಳಿತದಿಂದ ಅಕ್ಟೋಬರ್ 10 ರಂದು ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಪುರುಷ ಅಭ್ಯರ್ಥಿಗಳಿಗೆ:-ಕೌಲ್ ಬಜಾರ್ನ ರಂಗಮಂದಿರ ರಸ್ತೆಯಲ್ಲಿರುವ ಬಾಬು ಜಗಜೀವನ್ ರಾಮ್ ಭವನ (ನೋಡಲ್ ಅಧಿಕಾರಿ: ಚಿದಾನಂದಪ್ಪ, ಮೊ: 9900223306).
ಮಹಿಳಾ ಅಭ್ಯರ್ಥಿಗಳಿಗೆ:- ಕೌಲ್ ಬಜಾರ್ನ ಸ್ಟೇಡಿಯಂ ರಸ್ತೆಯಲ್ಲಿರುವ ವಾಲ್ಮೀಕಿ ಭವನ (ನೋಡಲ್ ಅಧಿಕಾರಿ: ಶಾಷು, ಮೊ: 9942451535).
ಅಭ್ಯರ್ಥಿಗಳಿಗೆ ಪ್ರಮುಖ ಸೂಚನೆಗಳು:*
ಎಲ್ಲಾ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷೆ ಪ್ರಾರಂಭವಾಗುವ ಕನಿಷ್ಠ 2 ಗಂಟೆಗಳ ಮುಂಚಿತವಾಗಿ ಹಾಜರಾಗಬೇಕು. ಪ್ರವೇಶ ಪತ್ರದೊಂದಿಗೆ (ಹಾಲ್ ಟಿಕೆಟ್) ಭಾವಚಿತ್ರವಿರುವ ಅಧಿಕೃತ ಗುರುತಿನ ಚೀಟಿ (ಆಧಾರ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿ) ತರುವುದು ಕಡ್ಡಾಯ.
ಕಟ್ಟುನಿಟ್ಟಿನ ನಿಯಮ ಮತ್ತು ನಿಷೇಧಾಜ್ಞೆ:*
ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಲಾಗಿದೆ. ಆಸುಪಾಸಿನ ಜೆರಾಕ್ಸ್ ಮತ್ತು ಇಂಟರ್ನೆಟ್ ಕೆಫೆಗಳನ್ನು ಮುಚ್ಚಲು ಆದೇಶಿಸಲಾಗಿದೆ.
*:ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ:*
ಪರೀಕ್ಷೆಗೆ ಸಂಬ0ಧಿಸಿದ0ತೆ ಸುಳ್ಳು ಸುದ್ದಿ ಅಥವಾ ವದಂತಿಗಳನ್ನು ಹಬ್ಬಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಸಾಮಾಜಿಕ ಜಾಲತಾಣಗಳ ಮೇಲೆ ತೀವ್ರ ನಿಗಾ ಇರಿಸಿದ್ದಾರೆ. ಎಲ್ಲಾ ಕೇಂದ್ರಗಳಿಗೂ ಸೂಕ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಮೂಲಸೌಕರ್ಯ ಮತ್ತು ಇತರ ವ್ಯವಸ್ಥೆಗಳು:*
ಹೆಚ್ಚುವರಿ ಬಸ್ ಸೌಲಭ್ಯ: ಅಭ್ಯರ್ಥಿಗಳು ಸರಿಯಾದ ಸಮಯಕ್ಕೆ ಕೇಂದ್ರ ತಲುಪಲು ಕೆ.ಕೆ.ಆರ್.ಟಿ.ಸಿ ವತಿಯಿಂದ ಹೆಚ್ಚುವರಿ ಬಸ್ಗಳನ್ನು ನಿಯೋಜಿಸಲಾಗಿದೆ.
ಆರೋಗ್ಯ ತಪಾಸಣೆ: ಪ್ರತಿ ಕೇಂದ್ರದಲ್ಲಿ 'ಥರ್ಮಲ್ ಸ್ಕ್ಯಾನರ್', 'ಪಲ್ಸ್ ಆಕ್ಸಿಮೀಟರ್' ಮತ್ತು ಪ್ರಥಮ ಚಿಕಿತ್ಸಾ ಪೆಟ್ಟಿಗೆಯೊಂದಿಗೆ ಆರೋಗ್ಯ ಇಲಾಖೆಯ ಇಬ್ಬರು ಅರೆ ವೈದ್ಯಕೀಯ ಸಿಬ್ಬಂದಿಗಳು ಹಾಜರಿರುತ್ತಾರೆ.
ಮೂಲಸೌಕರ್ಯ: ಕೇಂದ್ರಗಳಲ್ಲಿ ಕುಡಿಯುವ ನೀರು, ಬೆಳಕು, ಸ್ವಚ್ಛತೆ ಹಾಗೂ ವಿದ್ಯುತ್ ವ್ಯತ್ಯಯವಾಗದಂತೆ ಜೆಸ್ಕಾಂ ವತಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಗೌಪ್ಯತೆ ರಕ್ಷಣೆ: ಪ್ರಶ್ನೆಪತ್ರಿಕೆ ಮತ್ತು ಗೌಪ್ಯ ಸಾಮಗ್ರಿಗಳ ಸಾಗಾಣಿಕೆಗೆ ತ್ರಿಸದಸ್ಯ ಮಾರ್ಗಾಧಿಕಾರಿಗಳ ತಂಡ, ಖಜಾನೆಯಲ್ಲಿ 24/7 ಸಿಸಿಟಿವಿ ಕಣ್ಗಾವಲು ಹಾಗೂ ಪ್ರತಿ ಕೇಂದ್ರಕ್ಕೂ ಒಬ್ಬ ವೀಕ್ಷಕರನ್ನು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್. ಕೆ ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್