ಧಾರವಾಡ ಜಿಲ್ಲೆಯ ನವಲಗುಂದ ಬಳಿ ಭೀಕರ ಅಪಘಾತ: ಕಾರು-ಕ್ಯಾಂಟರ್ ಡಿಕ್ಕಿಯಾಗಿ ನಾಲ್ವರ ಸಾವು
ಹುಬ್ಬಳ್ಳಿ, 09 ಅಕ್ಟೋಬರ್ (ಹಿ.ಸ.): ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದ ಬಳಿ ಕಾರು ಮತ್ತು ಕ್ಯಾಂಟರ್ ನಡುವೆ ಶುಕ್ರವಾರ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗದಿಂದ ಹುಬ್ಬಳ್ಳಿ ಮಾರ್ಗವಾಗಿ ವಿಜಯಪುರದ ಕಡೆಗೆ ತೆರಳುತ್ತಿದ್ದ ಕಾರಿಗ
ಅಪಘಾತದ ಚಿತ್ರ


ಹುಬ್ಬಳ್ಳಿ, 09 ಅಕ್ಟೋಬರ್ (ಹಿ.ಸ.):

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದ ಬಳಿ ಕಾರು ಮತ್ತು ಕ್ಯಾಂಟರ್ ನಡುವೆ ಶುಕ್ರವಾರ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಶಿವಮೊಗ್ಗದಿಂದ ಹುಬ್ಬಳ್ಳಿ ಮಾರ್ಗವಾಗಿ ವಿಜಯಪುರದ ಕಡೆಗೆ ತೆರಳುತ್ತಿದ್ದ ಕಾರಿಗೆ ಎದುರಿನಿಂದ ಬಂದ ಕ್ಯಾಂಟರ್ ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಅಜಿತ್ (32), ರಾಕೇಶ (22), ಸಂದೀಪ್ (33) ಹಾಗೂ ಶೃತಿ (28) ಮೃತಪಟ್ಟಿದ್ದಾರೆ.

ಮೃತರ ಸಂಬಂಧಿ ಸುಖದೇವ ಅವರು ಮಾಧ್ಯಮಗಳಿಗೆ ತಿಳಿಸಿರುವ ಪ್ರಕಾರ, ಕಾರಿನಲ್ಲಿದ್ದವರು ರಾತ್ರಿ ಶಿವಮೊಗ್ಗದಿಂದ ಹೊರಟು, ಮಾರ್ಗಮಧ್ಯೆ ಹೋಟೆಲ್‌ನಲ್ಲಿ ಊಟ ಮಾಡಿದ್ದರು. ಇಂದು ಮಧ್ಯಾಹ್ನದ ವೇಳೆಗೆ ಊರು ತಲುಪುವುದಾಗಿ ಮನೆಯವರಿಗೆ ದೂರವಾಣಿ ಕರೆ ಮಾಡಿ ತಿಳಿಸಿದ್ದರು. ಆದರೆ, ಊರು ತಲುಪುವ ಮುನ್ನವೇ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಈ ಸಂಬಂಧ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande