ಕನ್ನಡ ರಾಜ್ಯೋತ್ಸವ ಆಚರಣೆಗೆ ಪೂರ್ವಭಾವಿ ಸಭೆ
ಕನ್ನಡ ರಾಜ್ಯೋತ್ಸವ ಆಚರಣೆಗೆ ಪೂರ್ವಭಾವಿ ಸಭೆ
ಕೋಲಾರ ಜಿಲ್ಲಾಧಿಕಾರಿ ಎಂ.ಆರ್.ರವಿ ಕುಮಾರ್ ಕನ್ನಡ ರಾಜ್ಯೋತ್ಸವ ಆಚರಣೆಯ ಬಗ್ಗ ಪೂರ್ವಭಾವಿ ಸಭೆ ನಡೆಸಿದರು.


ಕೋಲಾರ, 09 ಅಕ್ಟೋಬರ್: (ಹಿ.ಸ) :

ಕನ್ನಡ ರಾಜ್ಯೋತ್ಸವ ಆಚರಣೆಯು ಕೇವಲ ಒಂದು ಇಲಾಖೆಯ ಜವಾಬ್ದಾರಿಯಲ್ಲ. ಬದಲಾಗಿ ಜಿಲ್ಲೆಯ ಪ್ರತಿಯೊಂದು ಇಲಾಖೆ ಹಾಗೂ ಸಾರ್ವಜನಿಕರು ಕೈಜೋಡಿಸಿ ಈ ಬಾರಿಯ ರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆ ಹಾಗೂ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಕೋಲಾರ ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರದ ಆದೇಶದಂತೆ ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ. ೬೦ರಷ್ಟು ಕನ್ನಡ ಭಾಷೆ ಅಳವಡಿಸದ ವಾಣಿಜ್ಯ ಮಳಿಗೆಗಳು ಹಾಗೂ ಅಂಗಡಿ-ಮುAಗಟ್ಟುಗಳ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಹಾಗೂ ನಗರಸಭೆ ಅಧಿಕಾರಿಗಳಿಗೆ ಎಚ್ಚರಿಕೆ ರವಾನಿಸಿದರು.

ನವೆಂಬರ್ ೧ ರಂದು ಮಾತ್ರ ಕನ್ನಡ ಸಿನಿಮಾ ಪ್ರದರ್ಶಿಸಿ ಮರುದಿನವೇ ಪರಭಾಷಾ ಸಿನಿಮಾಗಳನ್ನು ಹಾಕುವ ಪ್ರವೃತ್ತಿ ನಿಲ್ಲಬೇಕು ಹಾಗೂ ಸಾಧ್ಯವಾದಷ್ಟು ನವೆಂಬರ್ ತಿಂಗಳಿಡೀ ಚಿತ್ರಮಂದಿರಗಳಲ್ಲಿ ಕಡ್ಡಾಯವಾಗಿ ಕನ್ನಡ ಚಲನಚಿತ್ರಗಳನ್ನೇ ಪ್ರದರ್ಶಿಸುವಂತೆ ಚಿತ್ರಮಂದಿರಗಳ ಮಾಲೀಕರಿಗೆ ಸ್ಪಷ್ಟ ನಿರ್ದೇಶನ ನೀಡಲಾಗುವುದು ಎಂದು ತಿಳಿಸಿದರು.

ಇದೇ ವೇಳೆ, ಕೆ.ಎಸ್.ಆರ್.ಟಿ.ಸಿ ಸೇರಿದಂತೆ ಎಲ್ಲಾ ಖಾಸಗಿ ಬಸ್ಗಳಲ್ಲಿ ಕನ್ನಡದ ಗೀತೆಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಮತ್ತು ಬಸ್ಗಳ ಮೇಲೆ ಕನ್ನಡದ ಬಾವುಟ ಹಾಗೂ ಸ್ಟಿಕ್ಕರ್ಗಳನ್ನು ಅಳವಡಿಸುವಂತೆ ಸಾರಿಗೆ ಇಲಾಖಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದಲ್ಲಿ ಅತ್ಯಂತ ವಿಜೃಂಭಣೆಯಿAದ ನಡೆಯುವ ಭುವನೇಶ್ವರಿ ದೇವಿಯ ರಥಯಾತ್ರೆ ಸಾಗುವ ಮಾರ್ಗಗಳಲ್ಲಿನ ಗುಂಡಿಗಳನ್ನು ಮುಚ್ಚಿ ತಕ್ಷಣವೇ ರಸ್ತೆ ದುರಸ್ತಿಗೊಳಿಸಲು ನಗರಸಭೆ ಆಯುಕ್ತರಿಗೆ ನಿರ್ದೇಶನ ನೀಡಲಾಯಿತು. ಮೆರವಣಿಗೆಗೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲು ಪೊಲೀಸ್ ಇಲಾಖೆಗೆ ಮತ್ತು ನಗರದ ಪ್ರಮುಖ ವೃತ್ತಗಳನ್ನು ದೀಪಾಲಂಕಾರದಿAದ ಸಿಂಗರಿಸಲು ಸೂಚಿಸಲಾಯಿತು. ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಂದ ನಾಡಹಬ್ಬದ ಮಹತ್ವ ಹಾಗೂ ಕನ್ನಡದ ಅಸ್ಮಿತೆ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಆಯೋಜಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಗೆ ಆದೇಶಿಸಲಾಯಿತು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande