
ಬೆಂಗಳೂರು, 09 ಅಕ್ಟೋಬರ್ (ಹಿ.ಸ.):
ಲಿಂಗಧೀರನಹಳ್ಳಿ ಗ್ರಾಮದ ಸರ್ವೆ ಸಂಖ್ಯೆ 6ರಲ್ಲಿರುವ 37 ಎಕರೆ 21 ಗುಂಟೆ ಜಮೀನನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಸಂಪೂರ್ಣವಾಗಿ ಸ್ವಾಧೀನಪಡಿಸಿಕೊಂಡಿದೆ. ಈ ಜಮೀನಿಗೆ ಸಂಬಂಧಿಸಿದಂತೆ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವುದು ಪ್ರಾಧಿಕಾರದ ಗಮನಕ್ಕೆ ಬಂದಿದೆ ಎಂದು ಬಿಡಿಎ ತಿಳಿಸಿದೆ.
ಈ ಜಮೀನಿನಲ್ಲಿ ನಿವೇಶನ ಖರೀದಿಸುವ ಮುನ್ನ ಸಾರ್ವಜನಿಕರು ಸಂಬಂಧಪಟ್ಟ ಅಧಿಕಾರಿಗಳಿಂದ ಭೂ ದಾಖಲೆಗಳು ಹಾಗೂ ಮಾಲೀಕತ್ವದ ವಿವರಗಳನ್ನು ಪರಿಶೀಲಿಸಿಕೊಳ್ಳಬೇಕು ಎಂದು ಪ್ರಾಧಿಕಾರ ಎಚ್ಚರಿಕೆ ನೀಡಿದೆ.
ಬಿಡಿಎ ಹೆಸರಿನಲ್ಲಿ ನಡೆಯುವ ವಂಚನೆಯ ವ್ಯವಹಾರಗಳು ಹಾಗೂ ನಕಲಿ ದಾಖಲೆಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಅನಧಿಕೃತ ನಿವೇಶನ ಮಾರಾಟ ಅಥವಾ ತಪ್ಪುದಾರಿಗೆಳೆಯುವ ಹೇಳಿಕೆಗಳನ್ನು ನಂಬಿ ವಂಚನೆಗೆ ಒಳಗಾಗಬಾರದು ಎಂದು ಸಾರ್ವಜನಿಕರಿಗೆ ಸೂಚಿಸಿದೆ.
ಹೆಚ್ಚಿನ ಮಾಹಿತಿಗಾಗಿ ಬಿಡಿಎ ಸಹಾಯವಾಣಿಯ ೯೪೮೩೧ ೬೬೬೨೨ ಸಂಖ್ಯೆಗೆ ಕರೆ ಮಾಡಬಹುದು ಅಥವಾ ವಾಟ್ಸ್‌ಆ್ಯಪ್ ಮೂಲಕ ಸಂಪರ್ಕಿಸಬಹುದು ಎಂದು ಬಿಡಿಎ ಪ್ರಕಟಣೆ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.