ಪಿಜಿಸಿಇಟಿ ಅಭ್ಯರ್ಥಿಗಳಿಗೆ ನಾಲ್ಕು ಆಯ್ಕೆ ದಾಖಲಿಸಲು ಅ.೧೩ರ ವರೆಗೆ ಅವಕಾಶ
ಬೆಂಗಳೂರು, 09 ಅಕ್ಟೋಬರ್ (ಹಿ.ಸ.): 2026ನೇ ಸಾಲಿನ ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ (ಪಿಜಿಸಿಇಟಿ) ಮೂಲಕ ಎಂಬಿಎ, ಎಂಸಿಎ, ಎಂಇ, ಎಂ.ಟೆಕ್‌ ಮತ್ತು ಎಂ.ಆರ್ಕ್‌ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳಿಗೆ ನಾಲ್ಕು ಆಯ್ಕೆಗಳನ್ನು ದಾಖಲಿಸಲು ಅವಕಾಶ ನೀ
ಪ್ರಕಟಣೆ


ಬೆಂಗಳೂರು, 09 ಅಕ್ಟೋಬರ್ (ಹಿ.ಸ.):

2026ನೇ ಸಾಲಿನ ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ (ಪಿಜಿಸಿಇಟಿ) ಮೂಲಕ ಎಂಬಿಎ, ಎಂಸಿಎ, ಎಂಇ, ಎಂ.ಟೆಕ್‌ ಮತ್ತು ಎಂ.ಆರ್ಕ್‌ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳಿಗೆ ನಾಲ್ಕು ಆಯ್ಕೆಗಳನ್ನು ದಾಖಲಿಸಲು ಅವಕಾಶ ನೀಡಲಾಗಿದೆ.

ಅಭ್ಯರ್ಥಿಗಳು ಅಕ್ಟೋಬರ್ 13ರ ಬೆಳಿಗ್ಗೆ 10 ಗಂಟೆಯವರೆಗೆ ತಮ್ಮ ಆಯ್ಕೆಗಳನ್ನು ದಾಖಲಿಸಬಹುದು. ಈಗಾಗಲೇ ಕಾಲೇಜುಗಳಲ್ಲಿ ಪ್ರವೇಶ ಪಡೆದಿರುವ ಅಭ್ಯರ್ಥಿಗಳೂ ಈ ಅವಕಾಶವನ್ನು ಬಳಸಿಕೊಳ್ಳಬಹುದು.

ಅಲ್ಲದೆ, ಅಕ್ಟೋಬರ್ 13ರ ಮಧ್ಯಾಹ್ನ 2 ಗಂಟೆಯಿಂದ ಅಕ್ಟೋಬರ್ 15ರ ಬೆಳಿಗ್ಗೆ 10 ಗಂಟೆಯವರೆಗೆ ದಾಖಲಿಸಿರುವ ಆಯ್ಕೆಗಳನ್ನು ಮೇಲಿನಿಂದ ಕೆಳಕ್ಕೆ ಅಥವಾ ಕೆಳಗಿನಿಂದ ಮೇಲಕ್ಕೆ ಮರುಹೊಂದಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಇನ್ನೂ ಎರಡು ಸುತ್ತಿನ ಸಮಾಲೋಚನೆ ನಡೆಸಲು ಅವಕಾಶ ನೀಡಬೇಕು ಹಾಗೂ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ಪ್ರತ್ಯೇಕ ವೇಳಾಪಟ್ಟಿ ಪ್ರಕಟಿಸಲು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಈ ಕುರಿತು ಮುಂದಿನ ತೀರ್ಮಾನ ಕೈಗೊಳ್ಳುವವರೆಗೆ ಅಭ್ಯರ್ಥಿಗಳಿಗೆ ನಾಲ್ಕು ಆಯ್ಕೆಗಳನ್ನು ದಾಖಲಿಸಲು ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande