ನಾಳೆ ಹುಬ್ಬಳ್ಳಿಯಲ್ಲಿ ‘ಬೃಂದಾವಿಹಾರಿ’ ಚಿತ್ರದ ಪ್ರೀ-ರಿಲೀಸ್ ಇವೆಂಟ್ ;ನಟ ಗಣೇಶ್ ಸೇರಿದಂತೆ ಚಂದನವನದ ಕಲಾವಿದರು ಭಾಗಿ
ಹುಬ್ಬಳ್ಳಿ, 09 ಅಕ್ಟೋಬರ್ (ಹಿ.ಸ.): ಕೆವಿಸಿ ಪ್ರೊಡಕ್ಷನ್ ಹಾಗೂ ವಿರಾಟ್ ಸಾಯಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಬಹುನಿರೀಕ್ಷಿತ ‘ಬೃಂದಾವಿಹಾರಿ’ ಚಿತ್ರದ ಪೂರ್ವ ಬಿಡುಗಡೆ ಕಾರ್ಯಕ್ರಮ ಅಕ್ಟೋಬರ್ 10ರಂದು ಸಂಜೆ 6 ಗಂಟೆಗೆ ನಗರದ ನೆಹರೂ ಮೈದಾನದಲ್ಲಿ ನಡೆಯಲಿದೆ. ಅಕ
ಚಿತ್ರ ತಂಡ


ಹುಬ್ಬಳ್ಳಿ, 09 ಅಕ್ಟೋಬರ್ (ಹಿ.ಸ.):

ಕೆವಿಸಿ ಪ್ರೊಡಕ್ಷನ್ ಹಾಗೂ ವಿರಾಟ್ ಸಾಯಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಬಹುನಿರೀಕ್ಷಿತ ‘ಬೃಂದಾವಿಹಾರಿ’ ಚಿತ್ರದ ಪೂರ್ವ ಬಿಡುಗಡೆ ಕಾರ್ಯಕ್ರಮ ಅಕ್ಟೋಬರ್ 10ರಂದು ಸಂಜೆ 6 ಗಂಟೆಗೆ ನಗರದ ನೆಹರೂ ಮೈದಾನದಲ್ಲಿ ನಡೆಯಲಿದೆ.

ಅಕ್ಟೋಬರ್ 16ರಂದು ಚಿತ್ರ ವಿಶ್ವಾದ್ಯಂತ ತೆರೆಕಾಣಲಿದ್ದು, ದೇಶಾದ್ಯಂತ 1,300 ಪರದೆಗಳಲ್ಲಿ ಬಿಡುಗಡೆಯಾಗಲಿದೆ. ಈಗಾಗಲೇ ಚಿತ್ರದ ಐದು ಹಾಡುಗಳು ಜನಪ್ರಿಯವಾಗಿದ್ದು, ಶನಿವಾರ ನಡೆಯಲಿರುವ ಕಾರ್ಯಕ್ರಮದಲ್ಲಿ ಚಿತ್ರದ ಮತ್ತೊಂದು ಹಾಡನ್ನು ಬಿಡುಗಡೆ ಮಾಡಲಾಗುತ್ತದೆ.

ಚಿತ್ರಕ್ಕೆ ಶ್ರೀನಿವಾಸ ರಾಜು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಗಣೇಶ್, ದೇವಿಕಾ ಭಟ್, ಮಾಳವಿಕಾ ಶರ್ಮಾ, ರಂಗಾಯಣ ರಘು ಸೇರಿದಂತೆ ಹಲವು ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಕಲಾವಿದರು, ಗಣ್ಯರು ಭಾಗಿ

ಕಾರ್ಯಕ್ರಮದಲ್ಲಿ ನಾಯಕ ನಟ ಗಣೇಶ್, ನಾಯಕಿ ದೇವಿಕಾ ಭಟ್, ನಿರ್ದೇಶಕ ಶ್ರೀನಿವಾಸ ರಾಜು, ನಿರ್ಮಾಪಕ ಸಮೃದ್ಧಿ ಮಂಜುನಾಥ, ಕಲಾವಿದರಾದ ರಂಗಾಯಣ ರಘು, ಸಾಧು ಕೋಕಿಲ, ಗಿಲ್ಲಿ ನಟ, ಜಗ್ಗಪ್ಪ, ಮಂಜು ಪಾವಗಡ ಹಾಗೂ ಕುರಿ ಪ್ರತಾಪ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಶಾಸಕರಾದ ಪ್ರಸಾದ್ ಅಬ್ಬಯ್ಯ, ಮಹೇಶ್ ಟೆಂಗಿನಕಾಯಿ, ವೀರೇಂದ್ರ ಪಪ್ಪಿ, ರಾಜು ಗೌಡ ಹಾಗೂ ನಟ ಡಾರ್ಲಿಂಗ್ ಕೃಷ್ಣ ಆಗಮಿಸಲಿದ್ದಾರೆ ಎಂದು ಚಿತ್ರತಂಡ ತಿಳಿಸಿದೆ.

ನೃತ್ಯ, ಹಾಸ್ಯ ಕಾರ್ಯಕ್ರಮಗಳ ರಂಗು

ಪೂರ್ವ ಬಿಡುಗಡೆ ಕಾರ್ಯಕ್ರಮದಲ್ಲಿ ನಟ ಗಣೇಶ್ ಹಾಗೂ ನಾಯಕಿ ದೇವಿಕಾ ಭಟ್ ಅವರು ‘ಬೃಂದಾವಿಹಾರಿ’ ಚಿತ್ರದ ಹಾಡಿಗೆ ನೃತ್ಯ ಪ್ರದರ್ಶಿಸಲಿದ್ದಾರೆ. ಬಿಗ್‌ಬಾಸ್ ಖ್ಯಾತಿಯ ಕಿಶನ್ ಹಾಗೂ ತಂಡದಿಂದ ನೃತ್ಯ ಕಾರ್ಯಕ್ರಮ ನಡೆಯಲಿದೆ. ಜಗ್ಗಪ್ಪ, ಮಂಜು ಪಾವಗಡ, ಗಿಲ್ಲಿ ನಟ ಸೇರಿದಂತೆ ‘ಕಾಮಿಡಿ ಕಿಲಾಡಿಗಳು’ ತಂಡದ ಕಲಾವಿದರು ಹಾಸ್ಯ ಪ್ರಹಸನಗಳ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande