ಉಪಚುನಾವಣೆಯಲ್ಲಿ ಆಡಳಿತಾರೂಢ ಪಕ್ಷಗಳ ಅಭ್ಯರ್ಥಿಗಳಿಗೆ ಮುನ್ನಡೆ
ನವದೆಹಲಿ, 09 ಅಕ್ಟೋಬರ್ (ಹಿ.ಸ.): ಮೂರು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳು ಹಾಗೂ ಅಸ್ಸಾಂನ ಒಂದು ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯ ಮತ ಎಣಿಕೆಯಲ್ಲಿ ಆಡಳಿತಾರೂಢ ಪಕ್ಷಗಳ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರದಲ್ಲಿ ದೇವಾಶಿಶ್ ಶರ್ಮಾ ಅವರು ಎಐಯುಡ
ಉಪಚುನಾವಣೆಯಲ್ಲಿ ಆಡಳಿತಾರೂಢ ಪಕ್ಷಗಳ ಅಭ್ಯರ್ಥಿಗಳಿಗೆ ಮುನ್ನಡೆ


ನವದೆಹಲಿ, 09 ಅಕ್ಟೋಬರ್ (ಹಿ.ಸ.):

ಮೂರು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳು ಹಾಗೂ ಅಸ್ಸಾಂನ ಒಂದು ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯ ಮತ ಎಣಿಕೆಯಲ್ಲಿ ಆಡಳಿತಾರೂಢ ಪಕ್ಷಗಳ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರದಲ್ಲಿ ದೇವಾಶಿಶ್ ಶರ್ಮಾ ಅವರು ಎಐಯುಡಿಎಫ್‌ನ ಬದ್ರುದ್ದೀನ್ ಅಜ್ಮಲ್ ವಿರುದ್ಧ 11 ಸಾವಿರ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಚುನಾವಣಾ ಆಯೋಗದ ಜಾಲತಾಣದ ಮಾಹಿತಿಯ ಪ್ರಕಾರ, ಪುದುಚೇರಿಯ ತಟ್ಟಾಂಚಾವಡಿ ವಿಧಾನಸಭಾ ಕ್ಷೇತ್ರದಲ್ಲಿ ಅಖಿಲ ಭಾರತ ಎನ್‌ಆರ್ ಕಾಂಗ್ರೆಸ್‌ನ ಅಶೋಕ್ ಆನಂದ್ ಗೆಲುವು ಸಾಧಿಸಿದ್ದಾರೆ.

ತಮಿಳುನಾಡಿನ ಮದುರಾಂತಕಂ ಕ್ಷೇತ್ರದಲ್ಲಿ ಟಿವಿಕೆ ಪಕ್ಷದ ಕೆ. ಮರಗತಂ ಕುಮಾರವೇಲ್ ಹಾಗೂ ಧಾರಾಪುರಂ ಕ್ಷೇತ್ರದಲ್ಲಿ ಪಿ. ಸತ್ಯಬಾಮಾ ಮುನ್ನಡೆ ಸಾಧಿಸಿದ್ದಾರೆ. ಈ ಇಬ್ಬರೂ ಈ ಹಿಂದೆ ಎಐಎಡಿಎಂಕೆ ಶಾಸಕರಾಗಿದ್ದರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಆಡಳಿತಾರೂಢ ಪಕ್ಷವನ್ನು ಸೇರಿದ್ದರು.

ಪಶ್ಚಿಮ ಬಂಗಾಳದ ರೆಜಿನಗರ ಮತ್ತು ನಂದಿಗ್ರಾಮ ವಿಧಾನಸಭಾ ಕ್ಷೇತ್ರಗಳಲ್ಲಿ ಕ್ರಮವಾಗಿ ಬಿಜೆಪಿಯ ಶಂಕರ್ ಸರ್ಕಾರ್ ಮತ್ತು ಹಸಿರಾಣಿ ರಥ ಮುನ್ನಡೆ ಸಾಧಿಸಿದ್ದಾರೆ.

ಹಸಿರಾಣಿ ರಥ ಅವರು ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕರಾಗಿದ್ದ ಚಂದ್ರನಾಥ ರಥ ಅವರ ತಾಯಿ. ಚಂದ್ರನಾಥ ರಥ ಅವರನ್ನು ಹತ್ಯೆ ಮಾಡಲಾಗಿತ್ತು. ರೆಜಿನಗರ ಮುಸ್ಲಿಂ ಬಾಹುಳ್ಯದ ವಿಧಾನಸಭಾ ಕ್ಷೇತ್ರವಾಗಿದೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande