ಕಾಕ್ಸ್ ಟೌನ್ನಲ್ಲಿ ಧರೆಗುರುಳಿದ ಬೃಹತ್ ಮರ: ಕೂದಲೆಳೆ ಅಂತರದಲ್ಲಿ ಪಾರಾದ ದಂಪತಿ, ಹೊಯ್ಸಳ ಪೊಲೀಸರು
ಬೆಂಗಳೂರು, 09 ಅಕ್ಟೋಬರ್ (ಹಿ.ಸ.): ನಗರದ ಕಾಕ್ಸ್ ಟೌನ್ನಲ್ಲಿ ಗುರುವಾರ ತಡ ರಾತ್ರಿ ಬೃಹತ್ ಮರವೊಂದು ರಸ್ತೆಯ ಮೇಲೆ ಉರುಳಿಬಿದ್ದಿದ್ದು, ಹೊಯ್ಸಳ ಪೊಲೀಸ್ ವಾಹನ ಹಾಗೂ ಕಾರಿನಲ್ಲಿ ತೆರಳುತ್ತಿದ್ದ ದಂಪತಿ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ರಸ್ತೆಯ ಮೇಲೆ ಸಂಚರಿಸುತ್ತಿದ್ದ ಹೊಯ್ಸಳ ಪೊಲೀ
bengaluru-cox-town-tree-fall-hoysala-police-couple-escape


ಬೆಂಗಳೂರು, 09 ಅಕ್ಟೋಬರ್ (ಹಿ.ಸ.):

ನಗರದ ಕಾಕ್ಸ್ ಟೌನ್ನಲ್ಲಿ ಗುರುವಾರ ತಡ ರಾತ್ರಿ ಬೃಹತ್ ಮರವೊಂದು ರಸ್ತೆಯ ಮೇಲೆ ಉರುಳಿಬಿದ್ದಿದ್ದು, ಹೊಯ್ಸಳ ಪೊಲೀಸ್ ವಾಹನ ಹಾಗೂ ಕಾರಿನಲ್ಲಿ ತೆರಳುತ್ತಿದ್ದ ದಂಪತಿ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.

ರಸ್ತೆಯ ಮೇಲೆ ಸಂಚರಿಸುತ್ತಿದ್ದ ಹೊಯ್ಸಳ ಪೊಲೀಸ್ ವಾಹನದ ಮೇಲೆ ಮರ ಬೀಳುವ ಸಾಧ್ಯತೆಯನ್ನು ಅರಿತ ಪೊಲೀಸರು ತಕ್ಷಣವೇ ವಾಹನವನ್ನು ಹಿಂದಕ್ಕೆ ತೆಗೆದುಕೊಂಡಿದ್ದಾರೆ.

ಇದೇ ವೇಳೆ ರಸ್ತೆಯಲ್ಲಿ ಕಾರಿನಲ್ಲಿ ತೆರಳುತ್ತಿದ್ದ ದಂಪತಿಯೂ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮರ ಉರುಳಿಬಿದ್ದ ಪರಿಣಾಮ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಘಟನೆಯ ಸಂಪೂರ್ಣ ದೃಶ್ಯ ಕಾರಿನ ಡ್ಯಾಶ್ಕ್ಯಾಮ್ನಲ್ಲಿ ಸೆರೆಯಾಗಿದ್ದು, ಬೃಹತ್ ಮರ ರಸ್ತೆ ಮೇಲೆ ಬೀಳುವ ಕ್ಷಣ ಹಾಗೂ ವಾಹನಗಳು ಅಪಾಯದಿಂದ ಪಾರಾದ ದೃಶ್ಯಗಳು ಗಮನ ಸೆಳೆದಿವೆ.

“ಮರ ಬೀಳುವ ಮುನ್ಸೂಚನೆ ಸಿಗುತ್ತಿದ್ದಂತೆ ಹೊಯ್ಸಳ ಪೊಲೀಸರು ವಾಹನವನ್ನು ಹಿಂದಕ್ಕೆ ತೆಗೆದುಕೊಂಡಿದ್ದಾರೆ.

ಅದೇ ಸಮಯದಲ್ಲಿ ಕಾರಿನಲ್ಲಿ ತೆರಳುತ್ತಿದ್ದ ದಂಪತಿಯೂ ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ದೃಶ್ಯ ಕಾರಿನ ಡ್ಯಾಶ್ಕ್ಯಾಮ್ನಲ್ಲಿ ಸೆರೆಯಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande