ಕರ್ನಾಟಕದ ಐದು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ; ಬೆಂಗಳೂರಲ್ಲೂ ಗುಡುಗು ಸಹಿತ ಮಳೆ ಸಾಧ್ಯತೆ
ಕರ್ನಾಟಕದ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ.
karnataka-weather-heavy-rain-forecast-in-five-districts-bengaluru-thunderstorms


ಬೆಂಗಳೂರು, 09 ಅಕ್ಟೋಬರ್ (ಹಿ.ಸ.):

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿದ್ದರೂ, ದಕ್ಷಿಣ ಒಳನಾಡಿನ ಐದು ಜಿಲ್ಲೆಗಳ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಅಕ್ಟೋಬರ್ ಇಂದು ರಾತ್ರಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳ ಕೆಲವು ಕಡೆ ಗುಡುಗು ಸಹಿತ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅ. 10ರಂದು ಹಲವು ಜಿಲ್ಲೆಗಳಲ್ಲಿ ಮಳೆ:ಅಕ್ಟೋಬರ್ 10ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳ ಕೆಲವು ಕಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನಲ್ಲಿ ಒಣಹವೆಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಕಡೆ ಮಳೆಯಾಗುವ ಮುನ್ಸೂಚನೆಯಿದ್ದರೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲೂ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande