ಮೈಸೂರು ದಸರಾ: ಅ.16ರಿಂದ 3,000 ಹೆಚ್ಚುವರಿ ಕೆ ಎಸ್ ಆರ್ ಟಿ ಸಿ ಬಸ್ ಗಳ ಸಂಚಾರ
ಮೈಸೂರು ದಸರಾ 2026ರ ಹಿನ್ನೆಲೆಯಲ್ಲಿ ಅಕ್ಟೋಬರ್ 16ರಿಂದ 27ರವರೆಗೆ ಕೆಎಸ್ಆರ್ಟಿಸಿ 3,000 ಹೆಚ್ಚುವರಿ ಬಸ್ಗಳನ್ನು ಓಡಿಸಲಿದ್ದು, ಬೆಂಗಳೂರಿನಿಂದ ಮೈಸೂರಿಗೆ 700 ವಿಶೇಷ ಬಸ್ಗಳ ವ್ಯವಸ್ಥೆ ಮಾಡಿದೆ.
ksrtc-to-operate-3000-special-buses-for-mysuru-dasara-2026


ಬೆಂಗಳೂರು, 09 ಅಕ್ಟೋಬರ್ (ಹಿ.ಸ.):

ಮೈಸೂರು ದಸರಾ 2026ರ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ.

ಅಕ್ಟೋಬರ್ 16ರಿಂದ 27ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಒಟ್ಟು 3,000 ಹೆಚ್ಚುವರಿ ಬಸ್ಗಳನ್ನು ಸಂಚಾರಕ್ಕೆ ನಿಯೋಜಿಸಲು ಸಿದ್ಧತೆ ಕೈಗೊಂಡಿದೆ.

ದಸರಾ ಮಹೋತ್ಸವದ ಸಂದರ್ಭದಲ್ಲಿ ಮೈಸೂರಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣಿಸುವವರ ಅನುಕೂಲಕ್ಕಾಗಿ 700 ವಿಶೇಷ ಬಸ್ಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಕೆಎಸ್ಆರ್ಟಿಸಿ ತಿಳಿಸಿದೆ.

ಇದರ ಜತೆಗೆ, ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ತೆರಳುವ ಪ್ರಯಾಣಿಕರಿಗಾಗಿ ಫ್ಲೈ ಬಸ್ ಸೇವೆಯನ್ನೂ ಕಲ್ಪಿಸಲಾಗಿದೆ.

ಮೈಸೂರು ನಗರ ಹಾಗೂ ಸುತ್ತಮುತ್ತಲಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಬಯಸುವವರ ಅನುಕೂಲಕ್ಕಾಗಿ ಒಂದು ದಿನದ ಪ್ರವಾಸ ಪ್ಯಾಕೇಜ್ ವ್ಯವಸ್ಥೆಯನ್ನೂ ಮಾಡಲಾಗಿದೆ.

ದಸರಾ ಅವಧಿಯಲ್ಲಿ ಪ್ರಯಾಣಿಕರ ದಟ್ಟಣೆ ನಿಯಂತ್ರಿಸುವುದು, ಸುಗಮ ಪ್ರಯಾಣಕ್ಕೆ ಅವಕಾಶ ಕಲ್ಪಿಸುವುದು ಹಾಗೂ ಪ್ರವಾಸಿಗರಿಗೆ ಸಾರಿಗೆ ಸೌಲಭ್ಯ ಒದಗಿಸುವುದು ಈ ವಿಶೇಷ ವ್ಯವಸ್ಥೆಯ ಉದ್ದೇಶವಾಗಿದೆ.

ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರಿಗೆ ತೊಂದರೆಯಾಗದಂತೆ ಅಗತ್ಯ ಸಾರಿಗೆ ಸೌಲಭ್ಯಗಳನ್ನು ಕಲ್ಪಿಸಲು ನಿಗಮ ಸಿದ್ಧತೆ ನಡೆಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande