ಬಿ. ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ : ಜಮೀರ್ ಅಹ್ಮದ್ ಖಾನ್
ಬಳ್ಳಾರಿ, 01 ನವೆಂಬರ್ (ಹಿ.ಸ.) ಬಳ್ಳಾರಿ ಗ್ರಾಮೀಣ ಶಾಸಕ, ಮಾಜಿ ಸಚಿವ ಬಿ. ನಾಗೇಂದ್ರ ಅವರು ನವೆಂಬರ್ 10ರಂದು ಮತ್ತೊಮ್ಮೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ವಿಶ್ವಾಸವಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಳ್ಳಾರಿಯಲ್ಲ
ಮಾಜಿ ಸಚಿವ ಬಿ. ನಾಗೇಂದ್ರ ಮತ್ತೊಮ್ಮೆ ಸಚಿವರು ಆಗುತ್ತಾರೆ : ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್


ಬಳ್ಳಾರಿ, 01 ನವೆಂಬರ್ (ಹಿ.ಸ.)

ಬಳ್ಳಾರಿ ಗ್ರಾಮೀಣ ಶಾಸಕ, ಮಾಜಿ ಸಚಿವ ಬಿ. ನಾಗೇಂದ್ರ ಅವರು ನವೆಂಬರ್ 10ರಂದು ಮತ್ತೊಮ್ಮೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ವಿಶ್ವಾಸವಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಳ್ಳಾರಿಯಲ್ಲಿ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣವನ್ನು ಭಾನುವಾರ ನೆರವೇರಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಧ್ವಜಾರೋಹಣ ನೆರವೇರಿಸಬೇಕು ಎನ್ನುವ ತಮ್ಮ ಬಹುದಿನದ ಕನಸು ನನಸಾಗಿದೆ. ಈ ಅವಕಾಶ ಕಲ್ಪಿಸಿದ ಮುಖ್ಯಮಂತ್ರಿಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕಾಸು ಅವ್ಯವಹಾರ ಪ್ರಕರಣದಲ್ಲಿ ಬಿ. ನಾಗೇಂದ್ರ ಅವರದ್ದು ಯಾವುದೇ ತಪ್ಪಿಲ್ಲ. ಪಕ್ಷಕ್ಕೆ ಮುಜುಗರ ಆಗಬಾರದು ಎನ್ನುವ ಉದ್ದೇಶದಿಂದ ಸ್ವಯಂಪ್ರೇರಣೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದ್ದು, ಶೀಘ್ರದಲ್ಲೇ ಸಿಐಡಿ ವರದಿ ಸಲ್ಲಿಸುವ ಸಾಧ್ಯತೆಗಳಿವೆ.

ಸಿಐಡಿಯ ವರದಿಯ ನಂತರ ಬಿ.ನಾಗೇಂದ್ರ ಅವರು ಮತ್ತೊಮ್ಮೆ ಸಚಿವರಾಗಲಿದ್ದಾರೆ ಎಂದರು.

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವುದನ್ನು ಸಹಿಸದ ಕೆಲವರು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಭಿನ್ನಾಭಿಪ್ರಾಯ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಅವರ ಪ್ರಯತ್ನ ಫಲಿಸುವುದಿಲ್ಲ. ಕಾಂಗ್ರೆಸ್ನ ಇಬ್ಬರು ನಾಯಕರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದರು.

ಕಳೆದ ಹತ್ತು ವರ್ಷಗಳಿಂದ ಬಸ್ ಪ್ರಯಾಣ ದರ ಹೆಚ್ಚಳ ಮಾಡಿಲ್ಲ. ಡೀಸೆಲ್ ಬೆಲೆ ಹಾಗೂ ನಿರ್ವಹಣಾ ವೆಚ್ಚ ಹೆಚ್ಚಳವಾಗಿರುವ ಕಾರಣ ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯವಾಗಿದೆ ಎಂದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande