ದಾವಣಗೆರೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ
ಬೆಣ್ಣೆನಗರಿ ದಾವಣಗೆರೆಯಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಜಿಲ್ಲಾ ಕ್ರೀಡಾಂಗಣದಲ್ಲಿ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಧ್ವಜಾರೋಹಣ ನೆರವೇರಿಸಿದರು. ವಿವಿಧ ತಂಡಗಳ ಪಥಸಂಚಲನ, ಮಕ್ಕಳ ನೃತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.
Davanagere Celebrates 71st Kannada Rajyotsava with Grandeur


ದಾವಣಗೆರೆ, 01 ನವೆಂಬರ್ (ಹಿ.ಸ.):

ಬೆಣ್ಣೆನಗರಿ ದಾವಣಗೆರೆಯಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ರಾಷ್ಟ್ರಧ್ವಜ ಹಾಗೂ ನಾಡಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ವಿವಿಧ ಪೊಲೀಸ್ ಹಾಗೂ ಶಾಲಾ-ಕಾಲೇಜು ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ವಿವಿಧ ತಂಡಗಳು ಶಿಸ್ತುಬದ್ಧವಾಗಿ ಕವಾಯತು ಪ್ರದರ್ಶಿಸಿ ಗಮನ ಸೆಳೆದವು. ಶಾಲಾ ಮಕ್ಕಳಿಂದ ನಡೆದ ನೃತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ರಾಜ್ಯೋತ್ಸವದ ಸಂಭ್ರಮವನ್ನು ಹೆಚ್ಚಿಸಿದವು.

ಇದಕ್ಕೂ ಮುನ್ನ ಗಣ್ಯರು ಕನ್ನಡಾಂಬೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ಸಮರ್ಪಿಸಿದರು. ಕಾರ್ಯಕ್ರಮದಲ್ಲಿ ಶಾಸಕ ಸಮರ್ಥ್ ಶಾಮನೂರು ಸೇರಿದಂತೆ ಹಲವು ಪ್ರಮುಖ ರಾಜಕೀಯ ನಾಯಕರು, ಜನಪ್ರತಿನಿಧಿಗಳು ಹಾಗೂ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿ ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ಪಾಲ್ಗೊಂಡರು.

ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಬಿಂಬಿಸುವ ಕಾರ್ಯಕ್ರಮಗಳ ಮೂಲಕ ಬೆಣ್ಣೆನಗರಿಯಲ್ಲಿ ಕನ್ನಡಾಭಿಮಾನ ಮೇಳೈಸಿತು. ಜಿಲ್ಲೆಯಾದ್ಯಂತ ರಾಜ್ಯೋತ್ಸವದ ಸಂಭ್ರಮ ಮನೆಮಾಡಿತ್ತು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande