ಅರಾಭಿಕೊತ್ತನೂರು ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ
ಅರಾಭಿಕೊತ್ತನೂರು ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ
ಕೋಲಾರ ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರತ್ನ ಪ್ರಶಸ್ತಿಗೆ ಭಾಜನರಾಗಿರುವ ಕನ್ನಡ ಶಿಕ್ಷಕ ವೆಂಕಟರೆಡ್ಡಿ ರವರನ್ನು ಅಭಿನಂದಿಸಲಾಯಿತು.


ಕೋಲಾರ , 01 ನವೆಂಬರ್ (ಹಿ.ಸ.):

ಕನ್ನಡ ನಾಡು,ನುಡಿ,ನೆಲಜಲದ ರಕ್ಷಣೆಗೆ ರಾಜ್ಯದ ಪ್ರತಿಯೊಬ್ಬರೂ ಸಂಕಲ್ಪ ಮಾಡಬೇಕು ನಿತ್ಯ ಜೀವನದಲ್ಲಿ ಕನ್ನಡವನ್ನೇ ಬಳಸಬೇಕು, ಹೊರ ರಾಜ್ಯಗಳಿಂದ ಬರುವವರಿಗೆ ಕನ್ನಡ ಕಲಿಸಬೇಕು ಎಂದು ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ತಾಹೇರಾ ನುಸ್ರತ್ ಕರೆ ನೀಡಿದರು.

ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ, ಭುವನೇಶ್ವರಿದೇವಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಆಚರಿಸಲಾಯಿತು. ಎಸ್ಡಿಎಂಸಿ ಅಧ್ಯಕ್ಷ ಎ.ಮಹೇಂದ್ರ ಮಾತನಾಡಿ, ಮಕ್ಕಳು ಕನ್ನಡವನ್ನು ಸ್ವಷ್ಟವಾಗಿ ಓದುವ,ಬರೆಯುವ,ಮಾತನಾಡುವುದನ್ನು ಚೆನ್ನಾಗಿ ಕಲಿತರೆ ಅದೇ ನಾಡು,ನುಡಿಗೆ ನೀಡುವಂತಹ ಗೌರವವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಎಸ್ಡಿಎಂಸಿ ಅಧ್ಯಕ್ಷ ಮಾಜಿ ಅಧ್ಯಕ್ಷ ಎ.ಮಹೇಂದ್ರ ಮಾತನಾಡಿ, ಕನ್ನಡ ನಾಡಿನ ಏಳ್ಗೆಗಾಗಿ ಶ್ರಮಿಸಿದ ಮಹನೀಯರ ಆದರ್ಶ ಪಾಲಸುವುದು ಅಗತ್ಯ, ಕನ್ನಡ ನಾಡು,ನುಡಿಗೆ ಧಕ್ಕೆ ಬರುವಂತಾದರೆ ಯಾವುದೇ ಹೋರಾಟಕ್ಕೂ ನಾವು ಸಿದ್ದರಾಗಬೇಕೆಂದರು.

ಕನ್ನಡ ಶಿಕ್ಷಕ ವೆಂಕಟರೆಡ್ಡಿ ಏಕೀಕರಣದ ಕುರಿತು ಭಾಷಣ ಮಾಡಿ, ಕನ್ನಡ ಏಕೀಕರಣಕ್ಕಾಗಿ ನಡೆದ ಹೋರಾಟದ ಕುರಿತು ಮಾಹಿತಿ ನೀಡಿ, ನಾಡು ಕಟ್ಟಲು ಹೋರಾಡಿದ ಮಹನೀಯರ ಆದರ್ಶ ಪಾಲಿಸಲು ಕೋರಿದರು.

ವಿದ್ಯಾರ್ಥಿಗಳು ಕನ್ನಡ ರಾಜ್ಯೋತ್ಸವದ ಕುರಿತು ಮಾತನಾಡಿದರು. ಶಿಕ್ಷಕರಾದ ಚೈತ್ರಾ ನೇತೃತ್ವದಲ್ಲಿ ಮಕ್ಕಳಿಂದ ನಡೆದ ನೃತ್ಯ,ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸೂರೆಗೊಂಡವು.

ಇದೇ ಸಂದರ್ಭದಲ್ಲಿ ಕರುನಾಡ ಕನ್ನಡ ರತ್ನ ಪ್ರಶಸ್ತಿಗೆ ಭಾಜನರಾಗಿರುವ ಕನ್ನಡ ಶಿಕ್ಷಕ ವೆಂಕಟರೆಡ್ಡಿ ಹಾಗೂ ಕಲಾಸಿರಿ ಪರೀಕ್ಷೆ ಬರೆದು ಉತ್ತೀರ್ಣರಾದ ಮಕ್ಕಳಿಗೆ ಪದಕ,ಪ್ರಮಾಣ ಪತ್ರ ನೀಡಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಶಿಕ್ಷಕರಾದ ಸಿದ್ದೇಶ್ವರಿ ಭವಾನಿ,ಶ್ವೇತಾ, ರಮಾದೇವಿ,ಚೈತ್ರಾ ಸಿ.ಎಲ್.ಶ್ರೀನಿವಾಸಲು,ಅಡುಗೆ ಸಿಬ್ಬಂದಿ ನೇತ್ರಾವತಿ, ಜಮುನಾ ಮತ್ತಿತರರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande