
ನವದೆಹಲಿ, 01 ನವೆಂಬರ್ (ಹಿ.ಸ.):
ಪ್ರಜಾಪ್ರಭುತ್ವದ ರಕ್ಷಣೆ ಹಾಗೂ ಮತದಾನದ ಹಕ್ಕಿನ ಉಳಿವಿಗಾಗಿ ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ‘ಮತ ಉಳಿಸಿ–ದೇಶ ಉಳಿಸಿ’ ಬೃಹತ್ ಜನಾಂದೋಲನದಲ್ಲಿ ಕರ್ನಾಟಕದ ಕಾಂಗ್ರೆಸ್ ನಾಯಕರು ಭಾಗವಹಿಸಿದರು.
ಈ ಕುರಿತು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ರಾಮಲೀಲಾ ಮೈದಾನದಲ್ಲಿ ನಡೆದ ಸಮಾವೇಶವು ದೇಶದ ಪ್ರಜಾಸತ್ತಾತ್ಮಕ ಹೋರಾಟಕ್ಕೆ ಹೊಸ ಶಕ್ತಿ ತುಂಬಿದೆ ಎಂದು ತಿಳಿಸಿದ್ದಾರೆ.
ಸಮಾವೇಶದಲ್ಲಿ ಹರಿಯಾಣದ ಉಸ್ತುವಾರಿ ಎಐಸಿಸಿ ಕಾರ್ಯದರ್ಶಿ ಸಂಹಯ್ ದತ್, ಹರಿಯಾಣ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ರಾವ್ ನರೇಂದ್ರ ಸಿಂಗ್, ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಳನಿಯಪ್ಪನ್ ಹಾಗೂ ಕರ್ನಾಟಕದ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರೊಂದಿಗೆ ಭಾಗವಹಿಸಿದ್ದಾಗಿ ಅವರು ಹೇಳಿದ್ದಾರೆ.
ಸಂವಿಧಾನದ ಆಶಯಗಳು, ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಪ್ರತಿಯೊಬ್ಬ ಪ್ರಜೆಯ ಮತದಾನದ ಹಕ್ಕನ್ನು ರಕ್ಷಿಸುವ ನಿಟ್ಟಿನಲ್ಲಿ ಸಂಘಟಿತ ಹೋರಾಟವನ್ನು ಮತ್ತಷ್ಟು ಬಲಿಷ್ಠವಾಗಿ ಮುಂದುವರಿಸಲಾಗುವುದು ಎಂದು ಬಿ.ಕೆ. ಹರಿಪ್ರಸಾದ್ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.