ಬಲಿಪಾಡ್ಯಮಿ ಹಬ್ಬಕ್ಕೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ಗಣ್ಯರ ಶುಭಾಶಯ
ಬೆಂಗಳೂರು, 10 ನವೆಂಬರ್ (ಹಿ.ಸ.): ಬಲಿಪಾಡ್ಯಮಿ ಹಬ್ಬದ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ ಅವರು ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶ
ಸಿಎಂ ಎಕ್ಸ್ ಪೋಟೋ


ಬೆಂಗಳೂರು, 10 ನವೆಂಬರ್ (ಹಿ.ಸ.):

ಬಲಿಪಾಡ್ಯಮಿ ಹಬ್ಬದ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ ಅವರು ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಶುಭಾಶಯ ಸಂದೇಶ ಹಂಚಿಕೊಂಡಿದ್ದು, ನಾಡಿನ ಸಮಸ್ತ ಜನತೆಗೆ ಬಲಿಪಾಡ್ಯಮಿ ಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ. ದಾನ, ಧರ್ಮ, ತ್ಯಾಗ ಹಾಗೂ ಜನಕಲ್ಯಾಣದ ಆದರ್ಶಗಳನ್ನು ಸಾರುವ ಬಲಿಚಕ್ರವರ್ತಿಯ ಜೀವನ ಎಲ್ಲರಿಗೂ ಸ್ಫೂರ್ತಿಯಾಗಲಿ. ಬಲಿರಾಜ್ಯದ ಸಮೃದ್ಧಿ ಮತ್ತು ಸಮಾನತೆಯ ಆಶಯದಂತೆ ನಾಡಿನ ಪ್ರತಿಯೊಂದು ಮನೆಮನಗಳಲ್ಲೂ ಸುಖ, ಶಾಂತಿ, ನೆಮ್ಮದಿ ಹಾಗೂ ಸಂತಸ ಸದಾ ನೆಲೆಸಿರಲಿ ಎಂದು ಹಾರೈಸಿದ್ದಾರೆ.

ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಬಲಿಪಾಡ್ಯಮಿ ಸಮೃದ್ಧಿಯ ಸಂಕೇತವಾಗಿದ್ದು, ಪ್ರತಿಯೊಬ್ಬರ ಬದುಕಿನಲ್ಲೂ ಸುಖ, ಶಾಂತಿ, ನೆಮ್ಮದಿ ತರಲಿ ಎಂದು ಆಶಿಸಿದ್ದಾರೆ. ಪರಸ್ಪರ ಪ್ರೀತಿ, ವಿಶ್ವಾಸ ಮತ್ತು ಸಹಬಾಳ್ವೆಯ ಭಾವನೆಗಳು ಕುಟುಂಬಗಳಲ್ಲಿ ಹಾಗೂ ಸಮಾಜದಲ್ಲಿ ಸದಾ ನೆಲೆಸಿರಲಿ. ರಾಜನೀತಿ, ಧರ್ಮನಿಷ್ಠೆ ಮತ್ತು ಜನಕಲ್ಯಾಣದ ಸಂಕೇತವಾದ ಮಹಾಬಲಿ ಚಕ್ರವರ್ತಿಯ ಆದರ್ಶಗಳು ಎಲ್ಲರಿಗೂ ಪ್ರೇರಣೆಯಾಗಲಿ ಎಂದು ತಿಳಿಸಿದ್ದಾರೆ.

ಸಮಾನತೆ, ಮಾನವೀಯತೆ ಮತ್ತು ಒಳಿತಿನ ಮೌಲ್ಯಗಳನ್ನು ಅಳವಡಿಸಿಕೊಂಡು ಎಲ್ಲರೂ ಸಂತೋಷದಿಂದ ಬಾಳುವ ಸುಂದರ ಸಮಾಜ ನಿರ್ಮಾಣವಾಗಲಿ. ನಾಡಿನ ಪ್ರತಿಯೊಂದು ಮನೆ ಮತ್ತು ಮನಗಳಲ್ಲೂ ಸಂತೋಷದ ಬೆಳಕು ಬೆಳಗಲಿ ಎಂದು ಅವರು ಶುಭ ಹಾರೈಸಿದ್ದಾರೆ.

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಬಲಿಪಾಡ್ಯಮಿ ಹಾಗೂ ಗೋ ಪೂಜೆಯ ಶುಭ ಸಂದರ್ಭದಲ್ಲಿ ದೇಶದ ಸಮಸ್ತ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಶುಭ ದಿನ ಎಲ್ಲರ ಬದುಕಿನಲ್ಲಿ ಸಂತೋಷ, ಶಾಂತಿ, ಸಾಮರಸ್ಯ ಮತ್ತು ಸಮೃದ್ಧಿಯನ್ನು ತರಲಿ ಎಂದು ಹಾರೈಸಿದ್ದಾರೆ.

ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ ಅವರು ಮಹಾವಿಷ್ಣುವಿನ ಐದನೇ ಅವತಾರವಾದ ವಾಮನನು ದಾನವರಾಜ ಬಲಿ ಚಕ್ರವರ್ತಿಯ ಮೇಲೆ ವಿಜಯ ಸಾಧಿಸಿದ ದಿನವೇ ಬಲಿಪಾಡ್ಯಮಿ ಎಂದು ತಿಳಿಸಿದ್ದಾರೆ. ಎಲ್ಲರಿಗೂ ಬಲಿಪಾಡ್ಯಮಿ ಹಾಗೂ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande