ಛಲವಾದಿ ನಾರಾಯಣಸ್ವಾಮಿಗೆ ಬೆದರಿಕೆ: ಕಾಂಗ್ರೆಸ್ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಬೆಂಗಳೂರು, 10 ನವೆಂಬರ್ (ಹಿ.ಸ.): ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಮನೆಗೆ ಸತತ ಮೂರು ದಿನಗಳಿಂದ ಕಾಂಗ್ರೆಸ್ ಕಾರ್ಯಕರ್ತರು ಚಾಕು, ಚೂರಿಗಳನ್ನು ಕಳುಹಿಸಿ ಬೆದರಿಕೆ ಒಡ್ಡಲು ಪ್ರಯತ್ನಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದ್ದಾರೆ. ಈ ಕುರಿತು ಸಾಮ
ಸಿ.ಟಿ.ರವಿ ಫೈಲ್ ಪೋಟೋ


ಬೆಂಗಳೂರು, 10 ನವೆಂಬರ್ (ಹಿ.ಸ.):

ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಮನೆಗೆ ಸತತ ಮೂರು ದಿನಗಳಿಂದ ಕಾಂಗ್ರೆಸ್ ಕಾರ್ಯಕರ್ತರು ಚಾಕು, ಚೂರಿಗಳನ್ನು ಕಳುಹಿಸಿ ಬೆದರಿಕೆ ಒಡ್ಡಲು ಪ್ರಯತ್ನಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಭಯೋತ್ಪಾದಕರಿಗೂ ಕಾಂಗ್ರೆಸಿಗರಿಗೂ ಏನು ವ್ಯತ್ಯಾಸ? ಅವರು ಬಾಂಬ್ ಕಳುಹಿಸುತ್ತಾರೆ, ಕಾಂಗ್ರೆಸಿಗರು ಚಾಕು, ಚೂರಿ ಕಳುಹಿಸುತ್ತಾರಷ್ಟೇ ಎಂದು ಟೀಕಿಸಿದ್ದಾರೆ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಉದ್ದೇಶಿಸಿ ಪ್ರಶ್ನಿಸಿರುವ ಅವರು, ನಿಮ್ಮ ಆಡಳಿತದಲ್ಲಿ ಜನಪ್ರತಿನಿಧಿಗಳಿಗೇ ಬೆದರಿಕೆ ಹಾಕುವ ಪರಿಸ್ಥಿತಿ ನಿರ್ಮಾಣವಾದರೆ ಜನಸಾಮಾನ್ಯರ ಸ್ಥಿತಿ ಏನು ಎಂದು ಪ್ರಶ್ನಿಸಿದ್ದಾರೆ.

ಇಂತಹ ಬೆದರಿಕೆಗಳಿಗೆ ಬಿಜೆಪಿ ಹೆದರುವುದಿಲ್ಲ. ಈ ಕೃತ್ಯದ ಮೂಲಕ ಕಾಂಗ್ರೆಸ್ ತನ್ನ 'ಕೊತ್ವಾಲ್ ಸಂಸ್ಕೃತಿ'ಯನ್ನು ನಾಡಿನ ಮುಂದೆ ಬಹಿರಂಗಪಡಿಸುತ್ತಿದೆ ಎಂದು ಸಿ.ಟಿ.ರವಿ ಆರೋಪಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande