
ಹುಬ್ಬಳ್ಳಿ, 10 ನವೆಂಬರ್ (ಹಿ.ಸ.):
ದೀಪಾವಳಿ ಹಬ್ಬದ ಅಂಗವಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಹುಬ್ಬಳ್ಳಿಯಲ್ಲಿರುವ ಲೋಕಸಭಾ ಕ್ಷೇತ್ರದ ಕಚೇರಿಯಲ್ಲಿ ಕುಟುಂಬ ಸಮೇತರಾಗಿ ಶ್ರೀ ಮಹಾಲಕ್ಷ್ಮಿ ಪೂಜೆ ನೆರವೇರಿಸಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.
ಕಚೇರಿಯ ಸಿಬ್ಬಂದಿ, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಗಣ್ಯರೊಂದಿಗೆ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ನಾಡಿನಾದ್ಯಂತ ಸುಖ, ಶಾಂತಿ, ಸಮೃದ್ಧಿ ಮತ್ತು ನೆಮ್ಮದಿ ನೆಲೆಸಲಿ. ಬೆಳಕಿನ ಹಬ್ಬ ದೀಪಾವಳಿ ಪ್ರತಿಯೊಬ್ಬರ ಬದುಕಿನಲ್ಲೂ ಹೊಸ ಭರವಸೆ ಮತ್ತು ಸಂತಸದ ಕಿರಣಗಳನ್ನು ತರಲಿ ಎಂದು ಶ್ರೀ ಮಹಾಲಕ್ಷ್ಮಿ ದೇವಿಯಲ್ಲಿ ಪ್ರಾರ್ಥಿಸಿರುವುದಾಗಿ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.
ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.