ಎನ್ಡಿಎ ಪರೀಕ್ಷೆಯಲ್ಲಿ ಮಹಿಳಾ ವಿಭಾಗಕ್ಕೆ ಪ್ರಥಮ ರ್ಯಾಂಕ್: ಶ್ರೇಯಾಗೆ ಪ್ರಲ್ಹಾದ ಜೋಶಿ ಅಭಿನಂದನೆ
ಹುಬ್ಬಳ್ಳಿ, 10 ನವೆಂಬರ್ (ಹಿ.ಸ.): ಕೇಂದ್ರ ಲೋಕಸೇವಾ ಆಯೋಗ ನಡೆಸಿದ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‌ಡಿಎ) ಪರೀಕ್ಷೆಯ ಮಹಿಳಾ ವಿಭಾಗದಲ್ಲಿ ದೇಶಕ್ಕೆ ಪ್ರಥಮ ರ‍್ಯಾಂಕ್ ಪಡೆದ ಭದ್ರಾವತಿಯ ಶ್ರೇಯಾ ಎನ್. ಗೌಡ ಅವರಿಗೆ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ ದೀಪಾವಳಿ ಹಬ್ಬದಂದು ದೂರವಾಣಿ ಕರೆ ಮಾಡಿ
ಎನ್ಡಿಎ ಪರೀಕ್ಷೆಯಲ್ಲಿ ಮಹಿಳಾ ವಿಭಾಗಕ್ಕೆ ಪ್ರಥಮ ರ್ಯಾಂಕ್: ಶ್ರೇಯಾಗೆ ಪ್ರಲ್ಹಾದ ಜೋಶಿ ಅಭಿನಂದನೆ


ಹುಬ್ಬಳ್ಳಿ, 10 ನವೆಂಬರ್ (ಹಿ.ಸ.):

ಕೇಂದ್ರ ಲೋಕಸೇವಾ ಆಯೋಗ ನಡೆಸಿದ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‌ಡಿಎ) ಪರೀಕ್ಷೆಯ ಮಹಿಳಾ ವಿಭಾಗದಲ್ಲಿ ದೇಶಕ್ಕೆ ಪ್ರಥಮ ರ‍್ಯಾಂಕ್ ಪಡೆದ ಭದ್ರಾವತಿಯ ಶ್ರೇಯಾ ಎನ್. ಗೌಡ ಅವರಿಗೆ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ ದೀಪಾವಳಿ ಹಬ್ಬದಂದು ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದರು.

ಕಠಿಣ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ದೇಶಕ್ಕೆ ಪ್ರಥಮ ರ‍್ಯಾಂಕ್ ಪಡೆಯುವ ಮೂಲಕ ಶ್ರೇಯಾ ಅವರು ಕರ್ನಾಟಕದ ಹಿರಿಮೆ ಹೆಚ್ಚಿಸಿದ್ದಾರೆ. ಅವರ ಸಾಧನೆ ರಾಜ್ಯ ಮಾತ್ರವಲ್ಲದೆ, ದೇಶದ ಮಹಿಳಾ ಸಮುದಾಯಕ್ಕೂ ಹೆಮ್ಮೆಯ ಸಂಗತಿಯಾಗಿದೆ ಎಂದು ಸಚಿವರು ಶ್ಲಾಘಿಸಿದರು.

ದೂರವಾಣಿ ಕರೆ ಮಾಡಿ ಶುಭ ಹಾರೈಕೆ

ಭದ್ರಾವತಿ ಸಮೀಪದ ತಿಮಲಾಪುರದ ಶ್ರೇಯಾ ಅವರಿಗೆ ದೂರವಾಣಿ ಕರೆ ಮಾಡಿದ ಪ್ರಲ್ಹಾದ ಜೋಶಿ, ಎನ್‌ಡಿಎ ಪರೀಕ್ಷೆಯ ಮಹಿಳಾ ವಿಭಾಗದಲ್ಲಿ ಕರ್ನಾಟಕದ ಅಭ್ಯರ್ಥಿಯಾಗಿ ದೇಶಕ್ಕೆ ಮೊದಲ ರ‍್ಯಾಂಕ್ ಪಡೆದಿರುವುದಕ್ಕೆ ಅಭಿನಂದನೆ ಸಲ್ಲಿಸಿದರು. ದೀಪಾವಳಿ ಹಬ್ಬದ ಶುಭಾಶಯಗಳನ್ನೂ ತಿಳಿಸಿದರು.

ಪ್ರಧಾನಿ ಮೋದಿ ಗಮನಕ್ಕೆ ಸಾಧನೆ

ಶ್ರೇಯಾ ಅವರ ಅಭೂತಪೂರ್ವ ಸಾಧನೆಯನ್ನು ನಾಳೆ ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೂ ತರುವುದಾಗಿ ಸಚಿವರು ತಿಳಿಸಿದರು.

ರಕ್ಷಣಾ ಕ್ಷೇತ್ರದಲ್ಲಿ ದೇಶಸೇವೆ ಸಲ್ಲಿಸಬೇಕೆಂಬ ಶ್ರೇಯಾ ಅವರ ಕನಸು ನನಸಾಗುತ್ತಿರುವುದು ಸಂತಸದ ಸಂಗತಿ. ಅವರ ಸಾಧನೆ ಕೋಟ್ಯಂತರ ಯುವತಿಯರಿಗೆ ಪ್ರೇರಣೆಯಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಯಶಸ್ಸು ಗಳಿಸಿ ದೇಶಕ್ಕೆ ಸೇವೆ ಸಲ್ಲಿಸುವಂತಾಗಲಿ ಎಂದು ಪ್ರಲ್ಹಾದ ಜೋಶಿ ಶುಭ ಹಾರೈಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande