ಜಾಗತಿಕ ಹೂಡಿಕೆದಾರರ ಸಮಾವೇಶ–2027ಕ್ಕೆ ಸಿದ್ಧತೆ: ನ.12ರಂದು ಪೂರ್ವಭಾವಿ ಕಾರ್ಯಕ್ರಮ
ಬೆಂಗಳೂರು, 10 ನವೆಂಬರ್ (ಹಿ.ಸ.): ಕರ್ನಾಟಕದ ಕೈಗಾರಿಕಾ ಸಾಮರ್ಥ್ಯ ಹಾಗೂ ಜಾಗತಿಕ ಹೂಡಿಕೆ ಅವಕಾಶಗಳನ್ನು ವಿಶ್ವದ ಉದ್ಯಮ ವಲಯಕ್ಕೆ ಪರಿಚಯಿಸುವ ಉದ್ದೇಶದಿಂದ ಆಯೋಜಿಸಲಾಗುತ್ತಿರುವ ಜಾಗತಿಕ ಹೂಡಿಕೆದಾರರ ಸಮಾವೇಶ–2027ರ ಪೂರ್ವಭಾವಿ ಕಾರ್ಯಕ್ರಮ ನವೆಂಬರ್ 12ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಈ ಸಂಬಂಧ
ಮುಖ್ಯಮಂತ್ರಿ ಭೇಟಿ ಮಾಡಿದ ಸಚಿವ ಎಂ.ಬಿ.ಪಾಟೀಲ


ಬೆಂಗಳೂರು, 10 ನವೆಂಬರ್ (ಹಿ.ಸ.):

ಕರ್ನಾಟಕದ ಕೈಗಾರಿಕಾ ಸಾಮರ್ಥ್ಯ ಹಾಗೂ ಜಾಗತಿಕ ಹೂಡಿಕೆ ಅವಕಾಶಗಳನ್ನು ವಿಶ್ವದ ಉದ್ಯಮ ವಲಯಕ್ಕೆ ಪರಿಚಯಿಸುವ ಉದ್ದೇಶದಿಂದ ಆಯೋಜಿಸಲಾಗುತ್ತಿರುವ ಜಾಗತಿಕ ಹೂಡಿಕೆದಾರರ ಸಮಾವೇಶ–2027ರ ಪೂರ್ವಭಾವಿ ಕಾರ್ಯಕ್ರಮ ನವೆಂಬರ್ 12ರಂದು ಬೆಂಗಳೂರಿನಲ್ಲಿ ನಡೆಯಲಿದೆ.

ಈ ಸಂಬಂಧ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

ನವೆಂಬರ್ 12ರಂದು ಗುರುವಾರ ಸಂಜೆ 6 ಗಂಟೆಗೆ ಬೆಂಗಳೂರಿನ ಐಟಿಸಿ ಗಾರ್ಡೇನಿಯಾದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಉಪಸ್ಥಿತರಿರಲಿದ್ದಾರೆ.

ಜಾಗತಿಕ ಹೂಡಿಕೆದಾರರು, ಉದ್ಯಮಿಗಳು ಹಾಗೂ ಕೈಗಾರಿಕಾ ವಲಯದ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕರ್ನಾಟಕದ ಕೈಗಾರಿಕಾ ಸಾಮರ್ಥ್ಯ, ಹೂಡಿಕೆ ಅವಕಾಶಗಳು ಮತ್ತು ಜಾಗತಿಕ ಉದ್ಯಮ ವಲಯದೊಂದಿಗಿನ ಸಹಭಾಗಿತ್ವವನ್ನು ಮತ್ತಷ್ಟು ಬಲಪಡಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ ಎಕ್ಸನಲ್ಲಿ ಮಾಹಿತಿ ನೀಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande