ಸಿ.ಆರ್.ಪಿ.ಎಫ್ ಯೋಧರ ಬಗ್ಗೆ ರಾಹುಲ್ ಗಾಂಧಿ ಕಾಳಜಿ ತೋರಿಸುತ್ತಿರುವುದು ಆಶ್ಚರ್ಯಕರ: ಪ್ರಹ್ಲಾದ ಜೋಶಿ ಟೀಕೆ
ಬೆಂಗಳೂರು, 10 ನವೆಂಬರ್ (ಹಿ.ಸ.): ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಯೋಧರ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈಗ ಕಾಳಜಿ ವ್ಯಕ್ತಪಡಿಸುತ್ತಿರುವುದು ಆಶ್ಚರ್ಯಕರವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟೀಕಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡ
ಪ್ರಹ್ಲಾದ ಜೋಶಿ ಫೈಲ್ ಪೋಟೋ


ಬೆಂಗಳೂರು, 10 ನವೆಂಬರ್ (ಹಿ.ಸ.):

ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಯೋಧರ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈಗ ಕಾಳಜಿ ವ್ಯಕ್ತಪಡಿಸುತ್ತಿರುವುದು ಆಶ್ಚರ್ಯಕರವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟೀಕಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ನಾಯಕರು ಈ ಹಿಂದೆ ಭಾರತೀಯ ಸಶಸ್ತ್ರ ಪಡೆಗಳ ಶೌರ್ಯವನ್ನು ಪ್ರಶ್ನಿಸಿದಾಗ ಮತ್ತು ಬಾಲಾಕೋಟ್ ವಾಯುದಾಳಿಯ ಬಗ್ಗೆ ಅನುಮಾನ ವ್ಯಕ್ತಪಡಿಸಿದಾಗ ರಾಹುಲ್ ಗಾಂಧಿ ಅವರ ಕಾಳಜಿ ಎಲ್ಲಿತ್ತು ಎಂದು ಪ್ರಶ್ನಿಸಿದ್ದಾರೆ. ದೇಶದ ಯೋಧರ ತ್ಯಾಗ ಮತ್ತು ಬಲಿದಾನವನ್ನು ಪ್ರಶ್ನಿಸಿದ್ದನ್ನು ಜನರು ಮರೆತಿಲ್ಲ ಎಂದು ಹೇಳಿದ್ದಾರೆ.

2014ರಿಂದ ಭಾರತವು ರಾಷ್ಟ್ರೀಯ ಭದ್ರತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಹಲವು ಮಹತ್ವದ ಸುಧಾರಣೆಗಳನ್ನು ಕೈಗೊಂಡಿದೆ. ಸೇನಾ ಪಡೆಗಳ ಮುಖ್ಯಸ್ಥರ (ಸಿಡಿಎಸ್) ಹುದ್ದೆ ಸೃಷ್ಟಿ, ಸಿಆರ್‌ಪಿಎಫ್ ಆಧುನೀಕರಣ, ಗಡಿ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಸ್ವದೇಶಿ ರಕ್ಷಣಾ ಉತ್ಪಾದನೆಗೆ ಉತ್ತೇಜನ ನೀಡುವ ಮೂಲಕ ಭದ್ರತಾ ವ್ಯವಸ್ಥೆಯನ್ನು ಬಲಪಡಿಸಲಾಗಿದೆ. ಇವು ಕೇವಲ ಹೇಳಿಕೆಗಳಲ್ಲ, ಕೈಗೊಂಡಿರುವ ಕ್ರಮಗಳಾಗಿವೆ ಎಂದು ಜೋಶಿ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಸಿಆರ್‌ಪಿಎಫ್ ಸತತ 12 ತಿಂಗಳ ಅವಧಿಯಲ್ಲಿ ಕಾರ್ಯಾಚರಣೆಯ ವೇಳೆ ಒಬ್ಬ ಯೋಧನನ್ನೂ ಕಳೆದುಕೊಳ್ಳದ ಸಾಧನೆ ಮಾಡಿದೆ. ಇಂತಹ ಸಾಧನೆ 47 ವರ್ಷಗಳ ಹಿಂದೆ ದಾಖಲಾಗಿತ್ತು ಎಂದು ಉಲ್ಲೇಖಿಸಿರುವ ಅವರು, ರಾಷ್ಟ್ರೀಯತೆಯ ವಿಚಾರದಲ್ಲಿ ಪ್ರಧಾನಿಯವರನ್ನು ಪ್ರಶ್ನಿಸುವ ಮೊದಲು ಕಾಂಗ್ರೆಸ್ ತನ್ನ ಹಿಂದಿನ ಆಡಳಿತದ ದಾಖಲೆಯನ್ನು ಸಮರ್ಥಿಸಿಕೊಳ್ಳಲಿ ಎಂದು ಸವಾಲು ಹಾಕಿದ್ದಾರೆ.

ಪ್ರತಿದಿನ ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೆಗಳನ್ನು ನೀಡುವುದು ಮತ್ತು ಸವಾಲುಗಳನ್ನು ಹಾಕುವುದನ್ನು ನಿಲ್ಲಿಸಿ, ಕಾಂಗ್ರೆಸ್ ತನ್ನ ಹಿಂದಿನ ಹಾಗೂ ಇಂದಿನ ನಿಲುವುಗಳ ಬಗ್ಗೆ ಮೊದಲು ಚರ್ಚೆಗೆ ಸಿದ್ಧವಾಗಲಿ ಎಂದು ರಾಹುಲ್ ಗಾಂಧಿ ಅವರನ್ನು ಪ್ರಹ್ಲಾದ ಜೋಶಿ ಆಗ್ರಹಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande